ಎಟಿಎಂ ಸರ್ಕಾರ ಮೈಸೂರು ದಸರಾದಲ್ಲಿಯೂ ದಂಧೆ, ಕಿಕ್ ಬ್ಯಾಕ್: ಬಿಜೆಪಿ ಆರೋಪ
ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಮೈಸೂರಿನವರೇ ಆದ ಅಂತರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂ. ರಾಜೀವ ತಾರಾನಾಥ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್ಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಮೈಸೂರಿನವರೇ ಆದ ಅಂತರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್ಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.
ಸಂಭಾವನೆ ಗೊತ್ತು ಮಾಡಿದ ಅಧಿಕಾರಿಗಳು ಬಳಿಕ ಅವರನ್ನು ಸಂಪರ್ಕಿಸಿದ್ದು, ಸಂಭಾವನೆಗಿಂತ ಮೂರು ಲಕ್ಷ ರೂ. ಹೆಚ್ಚು ಕೊಡುತ್ತೇವೆ. ಹೆಚ್ಚುವರಿಯಾಗಿ ಜಮೆಯಾಗಿರುವ 3 ಲಕ್ಷ ರೂ. ಹಣವನ್ನು ವಾಪಸ್ ನೀಡಬೇಕು ಎಂದು ಕೇಳಿದ್ದಾರೆ. ಇದಕ್ಕೆ ಪಂಡಿತ್ ರಾಜೀವ್ ತಾರಾನಾಥ್ ಅವರು ನಿರಾಕರಿಸಿದ್ದರಿಂದ ಅವರನ್ನು ದಸರಾ ಕಾರ್ಯಕ್ರಮದಿಂದ ಕೈಬಿಡಲಾಗಿದೆ ಎನ್ನಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿಯೊಂದನ್ನು ಉಲ್ಲೇಖಿಸುತ್ತಾ ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಎಟಿಎಂ ಸರ್ಕಾರ ನಾಡಿನ ಹೆಮ್ಮೆಯಾದ ಮೈಸೂರು ದಸರಾದಲ್ಲಿಯೂ ದಂಧೆ ನಡೆಸಿ ಕಿಕ್ ಬ್ಯಾಕ್ ಪಡೆದಿರುವುದು ಕರ್ನಾಟಕಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಆರೋಪಿಸಿದೆ.
ಲೂಟಿ ಮಾಡಲೆಂದೇ ಅಧಿಕಾರ ಹಿಡಿದಿರುವ ಎಟಿಎಂ ಸರ್ಕಾರ ಮೈಸೂರಿನವರೇ ಆದ ಅಂತರಾಷ್ಟ್ರೀಯ ಖ್ಯಾತಿಯ ಸಾರೋದ್ ವಾದಕ ಪದ್ಮಶ್ರೀ ಪಂಡಿತ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದಲೇ ಕಮಿಷನ್ ಕೇಳಿದ್ದಾರೆಂದರೆ ಅಧಿಕಾರಿಗಳಿಗೆ ಕಾಂಗ್ರೆಸ್ ಎಂತಹ ಟಾರ್ಗೆಟ್ ನೀಡಿರಬೇಕು. ಕಮಿಷನ್ ವ್ಯವಹಾರಕ್ಕೆ ತಾರಾನಾಥ್ ಅವರು ಒಪ್ಪದ ಕಾರಣ ಮೇರು ಕಲಾವಿದರಿಗೂ ವೇದಿಕೆ ನೀಡಲು ಲಜ್ಜೆಬಿಟ್ಟು ನಿರಾಕರಿಸಿರುವ ಸಿದ್ದರಾಮಯ್ಯ ಸರ್ಕಾರ ಕಂಡ ಕಂಡಲ್ಲಿ ಕಂಡಿದ್ದೆಲ್ಲಾ ಲೂಟಿ ಮಾಡಲು ಹಪಾಹಪಿಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


