ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ...

ಬೆಂಗಳೂರು: ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರೇ ಜಗತ್ತಿನ ಕಷ್ಟ - ದು:ಖಕ್ಕೆಲ್ಲ ಮಿಡಿಯುವ ನಿಮ್ಮ 'ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?
ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕನ್ನಡಿಗರಿಗೆ ಬೆದರಿಕೆ ಹಾಕಿದ್ದರು. ಈಗ ಅದರ ಫಲಿತಾಂಶವನ್ನು ನಾವು ನೋಡುತ್ತಿದ್ದೇವೆ.
ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಮತ್ತು ಕೇಂದ್ರ ಸಚಿವರು ಏಕೆ ಮೌನವಾಗಿದ್ದಾರೆ?
ಇದಕ್ಕೆ ಕನ್ನಡಿಗರ ಮೇಲಿನ ದ್ವೇಷ ಕಾರಣವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


