ರಾಜಕೀಯ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ರಾಜಕೀಯದಿಂದ ದೂರ ಉಳಿಯಲು ನಿರ್ಧಾರ: ನಿಖಿಲ್ ಕುಮಾರಸ್ವಾಮಿ

ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹೇಳಿದರು

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ರಾಜಕೀಯದಿಂದ ದೂರ ಉಳಿಯಲು ನಿರ್ಧಾರ: ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
Published On :

ಬೀದರ್‌: ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಬೀದರ್ ನಲ್ಲಿ ಭಾನುವಾರ ನಡೆದ ಅವರ ಗನ್‌ಮ್ಯಾನ್‌ ಮದುವೆಯಲ್ಲಿ ಭಾಗವಹಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲೆಲ್ಲಿ ಸ್ಪರ್ಧಿಸಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಜತೆಗಿನ ಮೈತ್ರಿ ಕುರಿತು ಜೆಡಿಎಸ್‌ ಹಿರಿಯರಾದ ಎಚ್‌.ಡಿ. ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರು ಶೀಘ್ರ ತೆರೆ ಎಳೆಯುತ್ತಾರೆ ಎಂದರು.

ಒಂದು ಪ್ರಾದೇಶಿಕ ಪಕ್ಷ ಕಟ್ಟಿ ಅದನ್ನು ಮುನ್ನಡೆಸಿಕೊಂಡು ಹೋಗುವುದು ಬಹಳ ಕಷ್ಟದ ಕೆಲಸ. ದೇವಗೌಡರ ಶ್ರಮ, ಉತ್ಸಾಹಿ ಕಾರ್ಯಕರ್ತರಿಂದ ಪಕ್ಷ ನಡೆಯುತ್ತಿದೆ. ಕುಮಾರಸ್ವಾಮಿ ಅವರು ಯಶಸ್ವಿಯಾಗಿ ಪಕ್ಷ ನಡೆಸಿಕೊಂಡು ಹೋಗುತ್ತಿದ್ದಾರೆ. ಅನೇಕ ಹಿರಿಯ ನಾಯಕರ ಕೊಡುಗೆ ಪಕ್ಷಕ್ಕಿದೆ. ನಾನು ಒಂದು ವಾರದಿಂದ ಸಿನಿಮಾ ಶೂಟಿಂಗ್‌ನಲ್ಲಿ ಮಗ್ನನಾಗಿದ್ದೇನೆ ಎಂದು ಹೇಳಿದರು.

ಸದ್ಯ ನಿಖಿಲ್ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಈಗ ಇವರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಿಖಿಲ್ ಕುಮಾರ್ ನಟಿಸುತ್ತಿದ್ದರೆ, ಲಕ್ಷ್ಮಣ್ ಅವರು ನಿರ್ದೇಶಕರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.