ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ 'ಸ್ಟಾರ್ ಚಂದ್ರು', ಪತ್ನಿಯ ಆಸ್ತಿ ಮೌಲ್ಯ 633 ಕೋಟಿ ರೂ.!
ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.

ಬೆಂಗಳೂರು: ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.
ಸ್ಟಾರ್ ಚಂದ್ರು ಅವರ ವೈಯಕ್ತಿಕ ಆಸ್ತಿ ಮೌಲ್ಯ ರೂ. 267.05 ಕೋಟಿ ಮತ್ತು 'ಹಿಂದೂ ಅವಿಭಜಿತ ಕುಟುಂಬ' ಅಡಿಯಲ್ಲಿ ಪಿತ್ರಾರ್ಜಿತವಾಗಿ 26.59 ಕೋಟಿ ರೂ ಸೇರಿದಂತೆ ಒಟ್ಟು 293.64 ಕೋಟಿ ರೂ.ಆಸ್ತಿ ಹೊಂದಿದ್ದಾರೆ. ಅವರ ಪತ್ನಿಯ ಆಸ್ತಿ ಮೌಲ್ಯ 329.32 ಕೋಟಿ ಆಗಿದ್ದು, ಅಫಿಡವಿಟ್ನಲ್ಲಿ 'ಸ್ಟಾರ್ ಇನ್ಫ್ರಾಟೆಕ್ ಪ್ರೈವೇಟ್ ಲಿಮಿಟೆಡ್'ನಲ್ಲಿ 176.44 ಕೋಟಿ ರೂ. ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಎನ್ಡಿಎ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



