ರಾಜಕೀಯ

ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ: ಸಚಿವ ಕೆ ವೆಂಕಟೇಶ್

ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಅವರೇ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿ ಯದುವೀರ್ ಅವರನ್ನ ನಿಲ್ಲಿಸಿದ್ದಾರೆ ಎಂದು ಸಚಿವ ಕೆ.ವೆಂಕಟೇಶ್ ಅವರು ಮಂಗಳವಾರ ಆರೋಪಿಸಿದ್ದಾರೆ.

ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ: ಸಚಿವ ಕೆ ವೆಂಕಟೇಶ್
ಕೆ. ವೆಂಕಟೇಶ್
Published On :

ಮೈಸೂರು: ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿ ಯದುವೀರ್ ಒಡೆಯರ್ ​​ಗೆ ಟಿಕೆಟ್ ಕೊಟ್ಟಿದ್ದಾರೆ. ಯದುವೀರ್ ಹೆಸರು ಇರಲೇ ಇಲ್ಲ. ಆದರೆ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಅವರೇ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿ ಯದುವೀರ್ ಅವರನ್ನ ನಿಲ್ಲಿಸಿದ್ದಾರೆ ಎಂದು ಸಚಿವ ಕೆ.ವೆಂಕಟೇಶ್ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್​​ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುತ್ತೆ ಅಂತ ಅವರ ಸ್ವಾರ್ಥಕ್ಕಾಗಿ ಯದುವೀರ್​​ ಒಡೆಯರ್ ಅವರನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ ಎಂದು ಹೇಳಿದರು.

ನಾನು ದೇವೇಗೌಡರ ಹತ್ತಿರದ ಸಂಬಂಧಿ. ಅವರು ಸ್ವಾರ್ಥಿಗಳು ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಆದರೆ ಸಿಎಂ ಸಿದ್ದರಾಮಯ್ಯ ನನ್ನನ್ನು ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.

ನಾನು ಯಾವ ಜಾತಿಗೆ ಸೇರಿದ್ದಿನೋ, ಲಕ್ಷ್ಮಣ್ ಕೂಡ ಅದೇ ಜಾತಿಯವರು. ಪ್ರತಾಪ್ ಸಿಂಹ ಇವರನ್ನ ಒಕ್ಕಲಿಗರಲ್ಲ ಅಂದರು. ಆದರೆ ಲಕ್ಷ್ಮಣ್​ ಅವರು ತಮ್ಮ ಕುಟುಂಬ ಸದಸ್ಯರ ಬಗ್ಗೆ ಮಾಹಿತಿಯನ್ನೇ ನೀಡಿದ್ದರು. ಹಾಗಾಗಿ ನಿಮಗೆ ಯಾವುದೇ ಸಂಶಯ ಬೇಡ ಅವರು ಒಕ್ಕಲಿಗರೇ. ಪ್ರತಾಪ್ ಸಿಂಹ ಬೇರೆ ಕಡೆಯಿಂದ ಬಂದವರು. ಲಕ್ಷ್ಮಣ್ ಇಲ್ಲಿಯವರೆ, ಮೈಸೂರಿನವರೇ, ಮೈಸೂರಿನಲ್ಲೇ ನೆಲೆಸಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.