ದೇಶದಲ್ಲಿ ಮೋದಿ ಅಲೆ ಇಲ್ಲ, ಬಿಜೆಪಿ 200 ಸ್ಥಾನವನ್ನೂ ಗೆಲ್ಲಲ್ಲ: ಡಿಕೆ ಶಿವಕುಮಾರ್ ಭವಿಷ್ಯ
ದೇಶದಲ್ಲಿ ಮೋದಿ ಅಲೆ ಇಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು: ದೇಶದಲ್ಲಿ ಮೋದಿ ಅಲೆ ಇಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ನಡೆದ ಎಕ್ಸ್‌ಪ್ರೆಸ್ ಸಂವಾದ - ಮಿನಿ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಅವರು, ಬಿಜೆಪಿ ಶಕ್ತಿಶಾಲಿಯಾಗಿದ್ದಿದ್ದರೆ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ. ಈ ಬಾರಿಯ ಚುನಾವಣಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದೂ ಖಚಿತವಿಲ್ಲ. ಹಾಗೂ ಕೇಜ್ರಿವಾಲ್ ಬಂಧನ ಬಿಜೆಪಿ ದೌರ್ಬಲ್ಯದ ಸಂಕೇತವಾಗಿದೆ ಎಂದು ಹೇಳಿದರು. ಅಲ್ಲದೆ, ಈ ಬಾರಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಕುರಿತು ಮಾತನಾಡಿ, ಪ್ರಧಾನಿ ಅಭ್ಯರ್ಥಿ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಒಬ್ಬ ವ್ಯಕ್ತಿಯನ್ನು ನಾಯಕನನ್ನಾಗಿ ಗುರುತಿಸುವ, ಮೇಲಕ್ಕೆತ್ತುವ ಬದಲು, ಸವಾಲುಗಳನ್ನು ಒಟ್ಟಿಗೆ ಎದುರಿಸುತ್ತೇವೆ. ವಿಧಾನಸಭೆಯಷ್ಟೇ ಅಲ್ಲ, ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿದರು.
ಬರ ಪರಿಹಾರ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕೇಂದ್ರೀಯ ಸಂಸ್ಥೆಗಳು ಕಿರುಕುಳ ನೀಡುತ್ತಿವೆ ಎಂದು ತಿಳಿಸಿದರು.
ಎಕ್ಸ್‌ಪ್ರೆಸ್ ಸಂವಾದ - ಮಿನಿ ಕಾನ್‌ಕ್ಲೇವ್ ಲೇಖಕ ಮತ್ತು ಇತಿಹಾಸಕಾರರಾದ ವಿಕ್ರಂ ಸಂಪತ್ ಮತ್ತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕರಾದ ಸಾಂತ್ವಾನ ಭಟ್ಟಾಚಾರ್ಯ ಅವರ ಸಂಭಾಷಣೆಯೊಂದಿಗೆ ಪ್ರಾರಂಭವಾಯಿತು.

ನಂತರ ಚಂದನ್ ಗೌಡ, ಬಿಎಸ್ ಮೂರ್ತಿ, ಸಂದೀಪ್ ಶಾಸ್ತ್ರಿ ಮತ್ತು ಸಂಹಿತಾ ಅರ್ನಿ ಅವರೊಂದಿಗೂ ಸಂವಾದ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಇತಿಹಾಸಕಾರರಾದ ವಿಕ್ರಂ ಸಂಪತ್ ಅವರು, ನಾವು ಈ ಹಿಂದೆ ಅಶಾಂತಿಯನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಅಹಿತಕರವಾದದ್ದನ್ನು ಅಳಿಸಿಹಾಕುತ್ತಿದ್ದೆವು ಎಂದು ಹೇಳಿದರು.
ಚಂದನ್ ಗೌಡ ಅವರು ಮಹಾತ್ಮ ಗಾಂಧಿಯವರ ‘ಹಿಂದ್ ಸ್ವರಾಜ್’ ಪುಸ್ತಕವನ್ನು ಸ್ಮರಿಸಿದರು, ಇತಿಹಾಸವು ಗತಕಾಲದಲ್ಲಿದೆ. ನಾವು ಅದನ್ನು ಪರಿಶೀಲಿಸುವ ಬದಲು ಗಿ ವರ್ತಮಾನದತ್ತ ಗಮನ ಹರಿಸಬೇಕೆಂದು ತಿಳಿಸಿದರು.
ಇದೇ ವೇಳೆ ಲೋಕಸಭಾ ಸಭೆ ಚುನಾವಣೆ, ಮತದಾರರ ಗ್ರಹಿಕೆ, ಮಹಿಳೆಯರ ಪಾತ್ರ, ಚುನಾವಣಾ ಬಾಂಡ್, ರಾಜಕೀಯದಲ್ಲಿ ಯುವ ಪೀಳಿಗೆಯ ಆಸಕ್ತಿ ಮತ್ತು ರಾಜಕೀಯ ಪಕ್ಷಗಳ ಬೆಳವಣಿಗೆ ಕುರಿತಂತೆಯೂ ಸಂವಾದದಲ್ಲಿ ಚರ್ಚೆಗಳು ನಡೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



