ಕೇರಳದಂತೆ ನಾವು ಸಹ ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ಕಾಶ್ಮೀರದಲ್ಲಿ ಮತ್ತೆ 370 ನೇ ವಿಧಿ ಹೇರುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ನಂತರ ಮತ್ತೆ ಸೈನಿಕರ ಮೇಲೆ ಕಲ್ಲು ತೂರಾಟ ಆರಂಭವಾಗುತ್ತದೆ. ಅವರು ಮತ್ತೆ ಬಾಬ್ರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಮತ್ತೆ ಎಲ್ಲಾ ಯೋಜನೆಗಳು ಮುಗಿಯುತ್ತವೆ ಎಂದು ಹೇಳಿದರು.
ಕಾಂಗ್ರೆಸ್ ಯಾವಾಗಲೂ ಸೈನಿಕರ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ಸೈನಿಕರ ಮೇಲೆ ಅನುಮಾನ ವ್ಯಕ್ತಪಡಿಸುವವರು ಯಾರು? ಅಂತಹವರ ಬಗ್ಗೆ ನಾವು ಏನು ಹೇಳುತ್ತೇವೆ? ಪುಲ್ವಾಮಾ ದಾಳಿಗೆ ಯಾರು ಹೊಣೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸರ್ಜಿಕಲ್ ಸ್ಟ್ರೈಕ್ ನಿಂದ ಉಗ್ರರ ತರಬೇತಿ ಕೇಂದ್ರವನ್ನು ಧ್ವಂಸಗೊಳಿಸಲಾಯಿತು ಎಂಬುದು ನಮಗೆ ತಿಳಿದಿದೆ. ಪಾಕಿಸ್ತಾನ ಈ ವಿಚಾರಕ್ಕೆ ವಿಶ್ವಸಂಸ್ಥೆಯ ಮೊರೆ ಹೋಗಿತ್ತು.ಆಗಲೂ ಕಾಂಗ್ರೆಸ್ ಈ ವಿಚಾರದಲ್ಲಿ ಸಂಶಯ ವ್ಯಕ್ತಪಡಿಸಿತ್ತು. ಆ ಪಕ್ಷಕ್ಕೆ ಸನಾತನ ಧರ್ಮ ಮತ್ತು ಸೈನಿಕರ ಬಗ್ಗೆ ಅನುಮಾನವಿದೆ. ದೇಶಪ್ರೇಮಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಅವರು ಸದಾ ಅನುಮಾನ ವ್ಯಕ್ತಪಡಿಸುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



