ಸೋಮಣ್ಣಗೆ ಡೋಂಟ್ ಕಮ್, ಕಾಂಗ್ರೆಸ್ ಅಭ್ಯರ್ಥಿ ಮುದ್ದೇಹನುಮೇಗೌಡಗೆ ವೆಲ್ ಕಮ್: ಮಾಧುಸ್ವಾಮಿ ನಡೆ ಬಿಜೆಪಿಗೆ ಮಗ್ಗುಲ ಮುಳ್ಳು!
ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಬಿಎಸ್ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಜೆಸಿ ಮಾಧುಸ್ವಾಮಿ ಅವರು ಮನೆಗೆ ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಬಿಎಸ್ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಜೆಸಿ ಮಾಧುಸ್ವಾಮಿ ಅವರು ಮನೆಗೆ ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.
ತುಮಕೂರು ಕ್ಷೇತ್ರದ ಟಿಕೆಟ್ ಮಾಜಿ ಸಚಿವ ವಿ.ಸೋಮಣ್ಣಗೆ ಕೊಟ್ಟಿರುವುದಕ್ಕೆ ಆಕ್ರೋಶಗೊಂಡಿರುವ ಜೆಸಿ ಮಾಧುಸ್ವಾಮಿ ಅವರು, ವಿ. ಸೋಮಣ್ಣ ನಮ್ಮ ಮನೆಗೆ ಬರಬೇಡಿ, ನಾನು ನಿಮ್ಮ ಪರ ಪ್ರಚಾರ ಮಾಡುವುದಿಲ್ಲ ಅಂತ ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಮುದ್ದಹನುಮೇಗೌಡ ಅವರು ಮಾಧುಸ್ವಾಮಿಯನ್ನು ಭೇಟಿ ಮಾಡಿರುವ ವಿಚಾರ ತುಮಕೂರು ಬಿಜೆಪಿ ಘಟಕದಲ್ಲಿನ ಭಿನ್ನಮತ ಶಮನವಾಗಿಲ್ಲವೆಂಬುವುದು ಎದ್ದು ಕಾಣುತ್ತಿದೆ.
ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ಎನ್ಡಿಎ ಅಭ್ಯರ್ಥಿ ವಿ. ಸೋಮಣ್ಣಗೆ ತಲೆನೋವು ಶುರುವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ತುಮಕೂರು ಜಿಲ್ಲೆಯಲ್ಲಿ ಅಪಸ್ವರ ಕೇಳಿಬಂದಿದೆ. ವರಿಷ್ಠರ ಮಟ್ಟದಲ್ಲಿ ಸರಿ ಆದರೂ ಕೆಳಮಟ್ಟದಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಮಾಧುಸ್ಚಾಮಿ ಅಸಮಧಾನ ಬೆನ್ನಲ್ಲೇ ಜೆಡಿಎಸ್ನಲ್ಲೂ ಭಿನ್ನಮತ ಶುರುವಾಗಿದ್ದು ಜಿ. ಪಂ ಸದಸ್ಯ, ಜೆಡಿಎಸ್ ಮುಖಂಡ ಕಲ್ಲೇಶ್ ಅವರು ಮೈತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



