ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯ್ಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯ್ಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ರಕ್ಷಾ ರಾಮಯ್ಯಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಇನ್ನು ಚಿಕ್ಕಬಳ್ಳಾಪುರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಡಾ. ಕೆ ಸುಧಾಕರ್ ಸ್ಪರ್ಧಿಸುತ್ತಿದ್ದಾರೆ. ಇನ್ನು ಎನ್ ಡಿಎ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಲ್ಲೂ ಆಂತರಿಕ ಕಚ್ಚಾಟಗಳು ನಡೆಯುತ್ತಿರುವುದರಿಂದ ಈ ಚಿಕ್ಕಬಳ್ಳಾಪುರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಎಂಬ ನಿರೀಕ್ಷೆ ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



