ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಬಗ್ಗೆ ಏನೂ ಹೇಳುವುದಿಲ್ಲ: ಪ್ರಹ್ಲಾದ್ ಜೋಶಿ
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದರು.

ಹುಬ್ಬಳ್ಳಿ: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದರು.
ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲಲು ದಿಂಗಾಲೇಶ್ವರ ಸ್ವಾಮೀಜಿಗಳು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಎುತ್ತರಿಸಿದ ಅವರು, ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ನಡೆಯುತ್ತದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.
ದಿಂಗಾಲೇಶ್ವರ ಸ್ವಾಮೀಜಿಗಳ ಯಾವುದೇ ಟೀಕೆಗಳಿಗೆ ನಾನು ಉತ್ತರ ನೀಡುವುದಿಲ್ಲ, ಶ್ರೀಗಳ ಪ್ರತಿಯೊಂದು ಆರೋಪವನ್ನು ಆಶೀರ್ವಾದ ಎಂದು ಪರಿಗಣಿಸುತ್ತೇನೆಂದು ತಿಳಿಸಿದರು.
ಇದೇ ವೇಳೆ ದಿಂಗಾಲೇಶ್ವರ ಸ್ವಾಮಿ ವಿರುದ್ಧ ‘ಜೋಶಿ ಬ್ರಿಗೇಡ್’ ಸಾಮಾಜಿಕ ಜಾಲತಾಣದಲ್ಲಿ ನಡೆಸುತ್ತಿರುವ ಪ್ರಚಾರ ಕುರಿತು ಮಾತನಾಡಿ, ಅಂತಹ ಯಾವುದೇ ಬ್ರಿಗೇಡ್‌ನೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ. ಸೋಷಿಯಲ್ ಮೀಡಿಯಾ ಮುಕ್ತ ಕ್ಷೇತ್ರವಾಗಿರುವುದರಿಂದ ಇದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
'ಕಳೆದ ಹತ್ತು ವರ್ಷದಲ್ಲಿ ಅಂದರೆ, ಮೋದಿಯವರು ಬರುವ ಮುಂಚೆ ದೇಶ ಹೇಗಿತ್ತು. ಈಗ ಹೇಗಿದೆ ಎಂಬುದು ಜನರಿಗೆ ಗೊತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಂದಮೇಲೆ ಭಾರತ ದೇಶ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯ ರಾಷ್ಟ್ರವಾಗಿ ಹೊರಹೊಮ್ಮಿದೆ. ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ ಬೇಕೋ..? ರಾಹುಲ್ ಗಾಂಧಿ ಹಾಗೂ ಇತ್ಯಾದಿ ನೇತೃತ್ವ ಬೇಕೋ..? ಎಂಬುದನ್ನು ನಿರ್ಧರಿಸುವ ಚುನಾವಣೆ ಇದಾಗಿದೆ. ಇಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿಕೊಂಡು ಜನರು ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಚಾರದ ಮುಂಭಾಗದಲ್ಲಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರೆ ರಾಷ್ಟ್ರೀಯ ನಾಯಕರು ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಲಿದ್ದಾರೆ. ಅವರ ಲಭ್ಯತೆಯ ಆಧಾರದ ಮೇಲೆ ಅವರ ದಿನಾಂಕಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಬಳಿಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ. ಬರ ಸಮೀಕ್ಷೆಯ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಪಾಪ್ಯುಲಾರಿಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡುತ್ತಿದೆ, ನಾಚಿಕೆ ಆಗುವುದಿಲ್ಲವೇ? ಯಡಿಯೂರಪ್ಪ ಸಿಎಂ ಇದ್ದ ಸಂದರ್ಭದಲ್ಲಿ ಬರ ಹಾವಳಿ ಇದ್ದಾಗ ಸಾಕಷ್ಟು ಹಣ ಕೊಟ್ಟಿದ್ದೇವೆ. ಎಷ್ಟೇ ತೆರಿಗೆ ಜಾಸ್ತಿ ಮಾಡಿದರೂ ರಾಜ್ಯ ಸರ್ಕಾರದ ಆದಾಯ ಮಾತ್ರ ಜಾಸ್ತಿಯಾಗುತ್ತಿಲ್ಲ. ಮುದ್ರಾಂಕ ಶುಲ್ಕದಿಂದಲೂ ಕೂಡ ಯಾವುದೇ ರೀತಿಯಲ್ಲಿ ಆದಾಯ ಸ್ಥಿತಿ ಸರಿದೂಗುತ್ತಿಲ್ಲ. ಅಲ್ಲದೆ ದೊಡ್ಡ ಮಟ್ಟದ ಭ್ರಷ್ಟಾಚಾರದಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದೆ'' ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



