ಆದಿ ಚುಂಚನಗಿರಿ ಮಠ ವಿಭಜಿಸಿದ್ದು ಯಾರು? ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದು ಯಾರು? HDKಗೆ ಚಲುವರಾಯಸ್ವಾಮಿ ಟಾಂಗ್
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಮಠ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ, ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಒಕ್ಕಲಿಗರ ಪ್ರಭಾವಿ ಮಠಾಧೀಶ ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಯ ಭೇಟಿಗೆ ಮುಗಿಬೀಳುತ್ತಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಮಠ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ, ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಒಕ್ಕಲಿಗರ ಪ್ರಭಾವಿ ಮಠಾಧೀಶ ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಯ ಭೇಟಿಗೆ ಮುಗಿಬೀಳುತ್ತಿದ್ದಾರೆ.
ಅಭ್ಯರ್ಥಿಗಳ ಈ ಭೇಟಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳ ನಡುವಿನ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಅಧಿಕಾರ ಅವಧಿಯಲ್ಲಿ ಕುಮಾರಸ್ವಾಮಿ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಂದು ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದವರು ಇಂದು ಆಶೀರ್ವಾದ ಪಡೆಯಲು ಮಠಕ್ಕೆ ಹೋಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಾವು ಸಹ ಜೆಎಸ್ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ನಾವು ಹೋಗುತ್ತೇವೆ, ಅವರು ಹೋಗಿದ್ದಾರೆ. ಇದು ಚುನಾವಣೆ ವೇಳೆ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಆದರೆ ಕುಮಾರಸ್ವಾಮಿ, ಸ್ವಾಮೀಜಿ ಫೋನ್ ಟ್ಯಾಪ್ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ ಕೊಟ್ಟರು ಎಂದು ಸಹ ಗೊತ್ತಿದೆ. ಅಂದು ಆದಿ ಚುಂಚನಗಿರಿ ಮಠವನ್ನು ವಿಭಜಿಸಿದ್ದರು, ಈಗ ಚುನಾವಣೆ ಬಂದಿದೆ. ಅದಕ್ಕೆ ಮಠಕ್ಕೆ ಕುಮಾರಸ್ವಾಮಿ ಹೋಗ್ತಾ ಇದ್ದಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



