ರಾಜಕೀಯ

ಕೊಡಗು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ- ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಸಂವಿಧಾನ ಉಳಿಸಿ ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕೊಡಗು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ- ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಮತ್ತಿತರರು
Published On :

ಕೊಡಗು: ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಸಂವಿಧಾನ ಉಳಿಸಿ ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಮಡಿಕೇರಿಯಲ್ಲಿ ‘ಜನಧ್ವನಿ-2’ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಉಳಿಸುವ ಬಾಧ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೆ ಸಿಕ್ಕ ಅವಕಾಶವಾಗಿದೆ. ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಹೇಳಿದರು.

"ಸಂವಿಧಾನ ಅಪಾಯದಲ್ಲಿದೆ ಎಂದರೆ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು ಮತ್ತು ದೇಶದ ಶ್ರಮಜೀವಿಗಳ ಜೀವನ ಮತ್ತು ಭವಿಷ್ಯಕ್ಕೆ ಅಪಾಯ" ಎಂದರ್ಥ. ಬಿಜೆಪಿ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯ ಷಡ್ಯಂತ್ರ ಎಂದು ಕೇಂದ್ರ ಸಚಿವರೇ ಬಹಿರಂಗವಾಗಿ ಹೇಳಿದ್ದಾರೆ ಮುಂಬರುವ ಲೋಕಸಭೆ ಚುನಾವಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೋಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಅವಕಾಶವನ್ನು ನಾಗರಿಕರು ಬಳಸಿಕೊಳ್ಳಬೇಕು ಎಂದರು.

ಸಂವಿಧಾನ ರಚನಾ ಸಭೆಯಲ್ಲಿ ಸಂವಿಧಾನ ವಿರೋಧಿಗಳ ವಿರುದ್ಧ ಡಾ.ಬಿ.ಆರ್.ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ‘ಸಮಾಜದ ಎಲ್ಲ ಜಾತಿ, ವರ್ಗ ಮತ್ತು ಧರ್ಮದ ಬಡವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಹತ್ತು ವರ್ಷಗಳಲ್ಲಿ ಪ್ರಧಾನಿಯಾಗಿ ಮೋದಿ ಒಂದಾದರೂ ಭರವಸೆಯನ್ನು ಈಡೇರಿಸಿದ್ದಾರೆಯೇ ಎಂದು ಹೃದಯದ ಮೇಲೆ ಕೈ ಇಟ್ಟುಕೊಂಡು ಹೇಳಲಿ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.