ರಾಜಕೀಯ

ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ
ನಟ ದರ್ಶನ್
Published On :

ಮಳವಳ್ಳಿ: ಲೋಕಸಭಾ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಬೆಳಗ್ಗೆ 9-30 ಗಂಟೆಗೆ ಹಲಗೂರಿನಿಂದ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸುವ ದರ್ಶನ್, ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ. ಕಾಗೇಪುರ (ತಳಗವಾದಿ) ಬಂಡೂರು,ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಕಳೆದ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಸುಮಲತಾ ಹಾಗೂ ಅವರ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರ ನಡೆಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.