ಬೆಳಗಾವಿ: ಭಾರೀ ಮತಗಳ ಅಂತರದಿಂದ ಗೆಲುವು; ನಾಮಪತ್ರ ಸಲ್ಲಿಸಿದ ಬಳಿಕ ಪ್ರಿಯಾಂಕಾ ಜಾರಕಿಹೊಳಿ ಮಾತು!
ಯಾವುದೇ ಅಬ್ಬರವಿಲ್ಲದೇ ಸರಳವಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುರುವಾರ ನಾಮಪತ್ರ ಸಲ್ಲಿಸಿದರು.

ಬೆಳಗಾವಿ: ಯಾವುದೇ ಅಬ್ಬರವಿಲ್ಲದೇ ಸರಳವಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುರುವಾರ ನಾಮಪತ್ರ ಸಲ್ಲಿಸಿದರು.
ಅವರ ತಂದೆ ಹಾಗೂ ಬೆಳಗಾವಿ ಜಿಲ್ಲೆಯ ಸಚಿವರಾದ ಸತೀಶ ಜಾರಕಿಹೊಳಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮತ್ತಿತರರು ಈ ವೇಳೆ ಜೊತೆಗಿದ್ದರು.
ನಮ್ಮ ದೊಡ್ಡ ಕುಟುಂಬದಲ್ಲಿ ಮೊದಲ ಮೊಮ್ಮಗಳಾಗಿ ನಾನು ಚುನಾವಣೆಗೆ ಸ್ಪರ್ಧಿಸಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ, ಕ್ಷೇತ್ರದ ಜನರು ನನ್ನನ್ನು ಹೆಚ್ಚಿನ ಮತಗಳಿಂದ ಬೆಂಬಲಿಸುತ್ತಾರೆ ಮತ್ತು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಪ್ರಿಯಾಂಕಾ ಹೇಳಿದರು. ಈ ಚುನಾವಣೆಯಲ್ಲಿ ಹೊಸ ಮುಖವನ್ನು ಪರಿಚಯಿಸಿದ್ದೇವೆ. ಜನರಿಂದ ಉತ್ತಮ ಬೆಂಬಲ ಪಡೆದು ಗೆಲುವು ಸಾಧಿಸುವ ಭರವಸೆ ಇದೆ. ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು ಒಗ್ಗಟ್ಟಿನಿಂದ ಇದ್ದು ಗೆಲುವು ಸಾಧಿಸುತ್ತೇವೆ, ರ್ಯಾಲಿಯಲ್ಲಿ ಶಕ್ತಿ ಪ್ರದರ್ಶನ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚಿಕ್ಕೋಡಿ ಮತ್ತು ಬೆಳಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯುವ ನಾಯಕರಿಗೆ ಅವಕಾಶ ನೀಡಿದೆ, ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡ, ಲಿಂಗಾಯತ, ಮರಾಠಾ ವರ್ಗಗಳಿಗೆ ಟಿಕೆಟ್ ನೀಡಲಾಗಿದೆ, ಈ ಅಂಶ ನಮಗೆ ಉಪಯುಕ್ತವಾಗಿದೆ, ಕಾಂಗ್ರೆಸ್ ನಲ್ಲಿ ಯಾವುದೇ ಬಂಡಾಯವಿಲ್ಲ. ನಮ್ಮ ಅಭ್ಯರ್ಥಿಗಳು ಉತ್ತಮ ಲೀಡ್ ನಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಚಿವೆ ಲಕ್ಷ್ನಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲೆ, ತಾಲ್ಲೂಕು, ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಲಿದ್ದೇವೆ. ನಾಗರಿಕರು ಜಾತಿ ನೋಡಿ ಮತ ಹಾಕುವುದಿಲ್ಲ, 10 ವರ್ಷಗಳ ಆಡಳಿತವನ್ನು ವಿಶ್ಲೇಷಿಸಿ ಐದು ಖಾತ್ರಿ ಯೋಜನೆಗಳ ಬಗ್ಗೆ ಯೋಚಿಸಿ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



