ರಾಜಕೀಯ

ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌; ನಾಮಪತ್ರ ವಾಪಸ್; ಜೋಶಿಗೆ ಬಿಗ್ ರಿಲೀಫ್

ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌; ನಾಮಪತ್ರ ವಾಪಸ್; ಜೋಶಿಗೆ ಬಿಗ್ ರಿಲೀಫ್
ದಿಂಗಾಲೇಶ್ವರ ಸ್ವಾಮೀಜಿ — TNIE
Published On :

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್‌ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಪ್ರಹ್ಲಾದ್‌ ಜೋಶಿಗೆ ರಿಲೀಫ್‌ ಸಿಕ್ಕಂತಾಗಿದೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಲ್ಹಾದ್‌ ಜೋಶಿ ಅವರನ್ನು ಗುರಿಯಾಗಿಸಿಕೊಂಡು, ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ನಾಮಪತ್ರ ಸಲ್ಲಿಸಿದ್ದರು. ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ. ಪ್ರಹ್ಲಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.

ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದು, ಅವರ ಜೊತೆ ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ. ಅದಾದ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ವಾಪಸ

ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.