ರಾಜಕೀಯ

ಉಚ್ಛಾಟನೆಗೆ ಹೆದರಲ್ಲ, ಗೆದ್ದು ಮರಳಿ ಬಿಜೆಪಿಗೆ ಹೋಗುವೆ: ಕೆ.ಎಸ್.ಈಶ್ವರಪ್ಪ

ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಹೇಳಿದರು.

ಉಚ್ಛಾಟನೆಗೆ ಹೆದರಲ್ಲ, ಗೆದ್ದು ಮರಳಿ ಬಿಜೆಪಿಗೆ ಹೋಗುವೆ: ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ
Published On :

ಶಿವಮೊಗ್ಗ: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಹೇಳಿದರು.

ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಕೆಎಸ್ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಅವರು, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. ನಾನು ಯಾವ ಉಚ್ಛಾಟನೆಗೆ ಹೆದರುವುದಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದರು.

ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಅವರಿಗೆ ಶಾಕ್ ನೀಡಿತ್ತು.

ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನು. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.