ಕಾಂಗ್ರೆಸ್ ಸರ್ಕಾರ PFI, SDPI ಪರ ಮೃದು ಧೋರಣೆ ತೋರುತ್ತಿದೆ: ಜೆಪಿ.ನಡ್ಡಾ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ಮತ್ತು ಎಸ್‌ಡಿಪಿಐನಂತಹ ಸಂಘಟನೆಗಳ ಕುರಿತು ಮೃದು ಧೋರಣೆ ತೋರುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.

ಹುಮನಾಬಾದ್ (ಬೀದರ್ ಜಿಲ್ಲೆ): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ಮತ್ತು ಎಸ್‌ಡಿಪಿಐನಂತಹ ಸಂಘಟನೆಗಳ ಕುರಿತು ಮೃದು ಧೋರಣೆ ತೋರುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.
‘ವಿಜಯ ಸಂಕಲ್ಪ’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಭಯದ ವಾತಾವರಣವಿದೆ ಎಂದು ಹೇಳಿದರು. ಈ ವೇಳೆ ಬೆಂಗಳೂರಿನ ಕೆಫೆಯಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಮತ್ತು ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಹತ್ಯೆಯ ಘಟನೆಗಳನ್ನು ಉಲ್ಲೇಖಿಸಿದರು.
ಜನರು ನಿರ್ಭೀತ ಸಮಾಜ ಮತ್ತು ಮಹಾತ್ಮಾ ಗಾಂಧೀಜಿಯವರು ಕನಸು ಕಂಡ ನನಸಾಗಬೇಕಾದರೆ, ಜನರು ಬಿಜೆಪಿಗೆ ಮತ ಹಾಕಬೇಕು. ಭ್ರಷ್ಟಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಜೈಲಿನಲ್ಲಿದ್ದಾರೆ. ಕೆಲವರು ಜಾಮೀನಿನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಭ್ರಷ್ಟಾರಾಕ್ಕಾಗಿ ಭೂಮಿ, ಆಕಾಶ, ಸಮುದ್ರವನ್ನೂ ಬಿಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಪ್ರಧಾನಿ ಮೋದಿಯವರನ್ನು ಕೊಂಡಾಡಿದರು. ಮೋದಿಯವರ ಸಾಧನೆಗಳನ್ನು ವಿವಿಧ ದೇಶಗಳು ಶ್ಲಾಘಿಸುತ್ತಿವೆ. ಧಾನ್ಯ ಉತ್ಪಾದನೆ, ಔಷಧಗಳು, ಆಟಿಕೆಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ನಾವು ಸ್ವಾವಲಂಬನೆ ಸಾಧಿಸಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಮ್ಮ ದೇಶವು ಹಲವಾರು ದೇಶಗಳಿಗೆ ಔಷಧಿಗಳು ಮತ್ತು ಲಸಿಕೆಗಳನ್ನು ಪೂರೈಸಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



