ಕುಮಾರಸ್ವಾಮಿ ಮನವೊಲಿಕೆಗೆ ಬಿಜೆಪಿ ನಾಯಕರ ಯತ್ನ: ಪಾದಯಾತ್ರೆಯಲ್ಲಿ ಭಾಗಿಯಾಗಲು HDK ಷರತ್ತು?
ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಚ್.ಡಿ.ಕೆ ಮನವೊಲಿಕೆ ಯತ್ನ ಮಾಡಿದ್ದು, ಈ ವೇಳೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ 3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದೆ ಎಂದು ಘೋಷಣೆಯಾಗಿದೆ. ಆದರೆ ಪಾದಯಾತ್ರೆ ಬಗ್ಗೆ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಂದೂಡಿಕೆಯಾಗಲಿದೆ ಎನ್ನಲಾಗಿತ್ತು. ಆದರೆ ಬಿಜೆಪಿ ನಾಯಕರು ನಿಗದಿಯಂತೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಜೆಡಿಎಸ್ ನಾಯಕರ ಮನವೊಲಿಕೆ ಯತ್ನ ನಡೆಸಿದ್ದಾರೆ.
ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಚ್.ಡಿ.ಕೆ ಮನವೊಲಿಕೆ ಯತ್ನ ಮಾಡಿದ್ದು, ಈ ವೇಳೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಜೆಡಿಎಸ್ ಖಡಕ್ ಸಂದೇಶ ರವಾನಿಸಿದೆ. ಹೆಚ್.ಡಿ ಕುಮಾರಸ್ವಾಮಿ ಮನವೊಲಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ.ಕೆ ಜೊತೆ ಚರ್ಚೆ ನಡೆಸಿದಾಗಲೂ ಇದೇ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಬಿಜೆಪಿ ಪಾದಯಾತ್ರೆ ವಿರುದ್ಧ HDK ಆಕ್ರೋಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


