ರಾಜಕೀಯ

ಮೇಕೆದಾಟು ಯೋಜನೆಗೆ HDK ಒಪ್ಪಿಗೆ ಪಡೆದಿದ್ದರೆ ಹಾರ ಹಾಕಿ ಸನ್ಮಾನಿಸುತ್ತಿದ್ದೆವು: ಕಾಂಗ್ರೆಸ್

ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗುವ ಮತ್ತು ಜನರ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ.

ಮೇಕೆದಾಟು ಯೋಜನೆಗೆ HDK ಒಪ್ಪಿಗೆ ಪಡೆದಿದ್ದರೆ ಹಾರ ಹಾಕಿ ಸನ್ಮಾನಿಸುತ್ತಿದ್ದೆವು: ಕಾಂಗ್ರೆಸ್
ಕಾಂಗ್ರೆಸ್
Published On :

ಮೈಸೂರು: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಟ್ಟಿದ್ದರೆ ಎನ್'ಡಿಎ ನಾಯಕರಿಗೆ ಹಾರ ಹಾಕಿ ಸನ್ಮಾನಿಸುತ್ತಿದ್ದೆವು ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ.

ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಿದ ಕಾಂಗ್ರೆಸ್ ಮುಖಂಡರು ಜೆಡಿಎಸ್ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗುವ ಮತ್ತು ಜನರ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ. ಯೋಜನೆಗೆ ಒಪ್ಪಿಗೆ ಸಿಕ್ಕಿದ್ದರೆ ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಮಾಲಾರ್ಪಣೆ ಮಾಡುತ್ತಿದ್ದೆವು. ಕುಮಾರಸ್ವಾಮಿಯವರಿಗೆ ಅಧಿಕಾರದ ದಾಹ ಹೆಚ್ಚಿದೆ. ಹೀಗಾಗಿ ಅಧಿಕಾರದ ದುರಾಸೆಯಿಂದ ಚುನಾಯಿತ ಸರ್ಕಾರವನ್ನು ಕೆಡವಲು ಯತ್ನಿಸುತ್ತಿದ್ದಾರೆಂದು ಕಿಡಿಕಾರಿದರು.

ಎನ್‌ಡಿಆರ್‌ಎಫ್‌ ನಿಧಿ ನಿರಾಕರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಿರುದ್ಧ ಹೋರಾಡಿದ ದೇಶದ ಏಕೈಕ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ. 36 ಲಕ್ಷ ರೈತರ 3600 ಕೋಟಿ ರೂ.ಗಳನ್ನು ಪಡೆಯಲು ನಾವು ಹೋರಾಟ ಮಾಡಿದ್ದೆವು. ನಮ್ಮ ಈ ಹೋರಾಟ ಕೇಂದ್ರ ಸರ್ಕಾರವನ್ನು ಬೆಚ್ಚಿಬೀಳಿಸಿದೆ, ಇದೀಗ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿದೆ.

ಆದರೆ, ರಾಜ್ಯಪಾಲರು ಸಂವಿಧಾನಕ್ಕಿಂತ ಮಿಗಿಲಾದವರಲ್ಲ, ಮುಖ್ಯಮಂತ್ರಿಗಳಿಗೆ ಕೆಲವೇ ಗಂಟೆಗಳಲ್ಲಿ ನೋಟಿಸ್ ನೀಡಿದ ರಾಜ್ಯಪಾರಲು ಮೂವರು ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗಲಿಲ್ಲ. ರಾಜ್ಯದ ಕೇಂದ್ರ ಸಚಿವರು ಸರ್ಕಾರವನ್ನು ಕಿತ್ತೊಗೆಯುವ ಬದಲು ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.