ಮುನಿಸು ಮರೆತು ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್: ಒಂದು ತಾಸಿಗೂ ಹೆಚ್ಚು ಚರ್ಚೆ!
ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಲೇ ಬಂದಿದ್ದ ಎಂಎಲ್ಸಿ ಬಿಕೆ ಹರಿಪ್ರಸಾದ್ ದಿಢೀರಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಒಂದು ವರ್ಷದ ನಂತರ ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸುದೀರ್ಘ ಒಂದುವರೆ ಗಂಟೆಗಳ ಕಾಲ ಸಿಎಂ ಹಾಗೂ ಹರಿಪ್ರಸಾದ್ ಮಾತುಕತೆ ನಡೆಸಿದರು. ಸಚಿವ ಮಹದೇವಪ್ಪ ಕರೆ ಮಾಡಿ ಬಿಕೆ ಹರಿಪ್ರಸಾದ್‌ಗೆ ಆಹ್ವಾನ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಬಳಿಗೆ ಹರಿಪ್ರಸಾದ್ ಅವರನ್ನು ಆರ್.ಎಲ್ ಜಾಲಪ್ಪ ಅವರ ಅಳಿಯ ನಾಗರಾಜ್ ಕರೆದುಕೊಂಡು ಹೋದರು. ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬರುವಂತೆ ಬಿಕೆ ಹರಿಪ್ರಸಾದ್‌ಗೆ ಸಿದ್ದರಾಮಯ್ಯ ಖುದ್ದು ಆಹ್ವಾನಿಸಿದರು.
ಬಿಜೆಪಿ- ಜೆಡಿಎಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಯಾವೆಲ್ಲ ಷಡ್ಯಂತ್ರ ತಮ್ಮ ವಿರುದ್ಧ ನಡೆದಿದೆ ಎಂಬ ಅಭಿಪ್ರಾಯವನ್ನು ಹರಿಪ್ರಸಾದ್ ಜೊತೆ ಸಿಎಂ ಹಂಚಿಕೊಂಡಿದ್ದಾರೆ. ಇದೀಗ ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಹರಿಪ್ರಸಾದ್ ಹೋಗ್ತಾರಾ ಇಲ್ಲವಾ ಎಂಬ ಕುತೂಹಲ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



