ರಾಜಕೀಯ

ಗಂಡಸ್ತನದ ರಾಜಕೀಯ ಮಾಡು, ನಪುಂಸಕನ ಕೆಲಸ ಮಾಡಬೇಡ; ನನ್ನನ್ನ ಕೆಣಕಿದರೇ ಹುಷಾರ್: ಡಿಕೆಶಿಗೆ HDK ವಾರ್ನಿಂಗ್

ಶಿವಕುಮಾರ್‌ಗೆ ವ್ಯಕ್ತಿತ್ವ ಎಂಬುದಿದೆಯಾ? ಆತನದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಧೈರ್ಯವಿದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕನ ಕೆಲಸ ಮಾಡುತ್ತಿದ್ದಾನೆ.

ಗಂಡಸ್ತನದ ರಾಜಕೀಯ ಮಾಡು, ನಪುಂಸಕನ ಕೆಲಸ ಮಾಡಬೇಡ; ನನ್ನನ್ನ ಕೆಣಕಿದರೇ ಹುಷಾರ್: ಡಿಕೆಶಿಗೆ HDK ವಾರ್ನಿಂಗ್
ಎಚ್ ಡಿ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್
Published On :

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಿವಕುಮಾರ್ ಅವರನ್ನು ನಪುಂಸಕ ಎಂದು ಜರಿದಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಶಿವಕುಮಾರ್‌ಗೆ ವ್ಯಕ್ತಿತ್ವ ಎಂಬುದಿದೆಯಾ? ಆತನದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ?’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಧೈರ್ಯವಿದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕನ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನಿಸುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂಬುದನ್ನು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು ಹಾಗೂ ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ’ ಎಂದೂ ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್.. ಹುಷಾರ್ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟರು. ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ? ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿದರು.

ನನ್ನದು ಪಾರಾದರ್ಶಕ ಆಡಳಿತ. ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೀಡು ಹೆಸರಿನಲ್ಲಿ ಲೂಟಿ ಹೊಡೆದಿದ್ದೀರಿ. ಕೆಂಪಣ್ಣ ವರದಿ ಏನಾಯಿತು? ಸದನ ಸಮಿತಿ ವರದಿ ಎಲ್ಲಿ ಇಟ್ಕೊಂಡಿದ್ದೀರಿ? ಕೆಟ್ಟ ಪದ ಬಳಸ ಬಾರದು. ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ ಕೆ ಸುಬ್ಬಯ್ಯ ಕಾಲದಿಂದಲೂ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಮಾಡಿ ಬಿಡುಗಡೆ ಮಾಡಿದ್ದೀಯಾ ಪೊಣ್ಣನ್ನ? ಎಂದು ವಾಗ್ದಾಳಿ ನಡೆಸಿದರು.

ನಾನು ಸಿಎಂ ಆಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾ? ನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ಇದರಲ್ಲಿ ನನ್ನ ಮೇಲೆ ಏನು ಅಪಾದನೆ ಏನೂ ಇಲ್ಲ” ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.