'ಗುಳಿಗೆ ಸಿದ್ದ ಒಳಗೆ ಮೆದ್ದ'; ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲಿ ಬಂಡವಾಳ ಬಯಲಾಗಿದೆ: JDS
ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ಹರಿಹಾಯ್ದಿದೆ.

ಬೆಂಗಳೂರು: ತಮ್ಮ ಬಳಿ ಯಾವುದೇ ನಿವೇಶನ ಇಲ್ಲ. ನಿವೇಶನ ಬೇಕೆಂದು ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜಾತ್ಯತೀಯ ಜನತಾ ದಳ ತಿರುಗೇಟು ನೀಡಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್, ಗುಳಿಗೆ ಸಿದ್ದ ಒಳಗೆ ಮೇಯಿದ ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ, ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ಹರಿಹಾಯ್ದಿದೆ.
ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ ಎಂದು ಜೆಡಿಎಸ್ ಲೇವಡಿ ಮಾಡಿದೆ. ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



