ದೆಹಲಿಯಲ್ಲಿ ಮೊಕ್ಕಾಂ ಹೂಡಿದ ಪರಮೇಶ್ವರ್: ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ರಾಜ್ಯ ರಾಜಕಾರಣದಲ್ಲಿ ಚಟುವಟಿಕೆ ಶುರು
ಪರಮೇಶ್ವರ್ ಅವರು ದೆಹಲಿಗೆ ಭೇಟಿ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗಿದ್ದರೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ದೆಹಲಿಯಲ್ಲೇ ಮೊಕ್ಕಾಂ ಹೂಡಿರುವುದು ನಾಯತ್ವ ಬದಲಾವಣೆ ಕುರಿತು ಊಹಾಪೋಹಗಳು ಶುರುವಾಗುವಂತೆ ಮಾಡಿದೆ.
ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಮುಡಾ ಹಗರಣ ಪ್ರಕರಣ ಕುರಿತು ನ್ಯಾಯಾಲಯದ ತೀರ್ಪಿನ ಸಂಭವನೀಯ ಪರಿಣಾಮಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ರಾಹುಲ್ ಗಾಂಧಿ ಅವರ ಆಪ್ತರೆಂದೇ ಹೇಳಲಾಗುವ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮುಂದುವರಿಸಲು ಬಲವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಾಜ್ಯ ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ವೇಣುಗೋಪಾಲ್ ಅವರ ಪಾತ್ರ ಪ್ರಮುಖವಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಪರಮೇಶ್ವರ್ ಅವರೂ ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಈ ಭೇಟಿಯಲ್ಲಿ ಯಾವುದೇ ವಿಶೇಷಗಳೇನು ಇಲ್ಲ. ದೆಹಲಿಗೆ ಭೇಟಿ ನೀಡಿದಾಗಲೆಲ್ಲಾ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗುತ್ತೇನೆಂದು ಹೇಳಿದ್ದಾರೆ.
ಮುಡಾ ಹಗರಣ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ನಾವು ಹೋರಾಟ ಮುಂದುವರೆಸಿದ್ದೇವೆ. ಹೈಕೋರ್ಟ್ ಆದೇಶದ ನಂತರ ರಾಜಕೀಯ ನಿರ್ಧಾರದ ಅಗತ್ಯವಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ಜೊತೆಗೆ ನ್ಯಾಯಾಲಯದ ಆದೇಶದ ಬಳಿಕದ ಸಾಧಕ-ಬಾಧಕಗಳನ್ನು ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿಸಿದ್ದಾರೆ.
ಏತನ್ಮಧ್ಯೆ, ನವದೆಹಲ್ಲಿಯೇ ಉಳಿದುಕೊಂಡಿರುವ ಡಿಕೆ ಶಿವಕುಮಾರ್ ಅವರು ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



