ಯತ್ನಾಳ್ ಹೊರಗಿನವರಲ್ಲ, ಎಲ್ಲಾ ಸಮಸ್ಯೆಗಳು ಮಾತುಕತೆ ಮೂಲಕ ಇತ್ಯರ್ಥವಾಗಲಿವೆ: ಯಡಿಯೂರಪ್ಪ
ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ: ಬಿಜಾಪುರ ಶಾಸಕ ಮತ್ತು ಸದಾ ತಮ್ಮನ್ನು ಟೀಕಿಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರು "ಹೊರಗಿನವರಲ್ಲ" ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರಾಗಿರುವ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರು ಪಕ್ಷವನ್ನು ಬಲಪಡಿಸುವಲ್ಲಿ ನಿಟ್ಟಿನಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದರು.
ಯತ್ನಾಳ್ ಅವರು ಹೊರಗಿನವರಲ್ಲ, ಕೆಲವು ಕಾರಣಗಳಿಂದ ಅವರು ಆಕ್ರೋಶಗೊಂಡಿರಬಹುದು. ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬುದು ನನ್ನ ನಿರೀಕ್ಷೆ. ಇದು ವಿಜಯೇಂದ್ರ ಅವರ ನಿರೀಕ್ಷೆಯೂ ಹೌದು.. ಎಂದು ಮಾಜಿ ಮುಖ್ಯಮಂತ್ರಿ ಒಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಯಾವುದೇ ಲೋಪದೋಷಗಳಿದ್ದರೆ ಎದುರುಬದುರು ಕುಳಿತು ಚರ್ಚಿಸಿ, ಇತ್ಯರ್ಥಪಡಿಸಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಇದು ನನ್ನ ಅಭಿಪ್ರಾಯ. ಇದಕ್ಕೆ ಎಲ್ಲರೂ ಸಹಕರಿಸುತ್ತಾರೆ ಎಂದು ಆಶಿಸುತ್ತೇನೆ ಎಂದರು.
ಯತ್ನಾಳ್ ಅವರು ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, "ಅವರು ಮಾತನಾಡಲಿ, ಆದರೆ ನಾವು ಎಲ್ಲವನ್ನೂ ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ" ಎಂದು ಹೇಳಿದರು.
ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಹಿರಂಗವಾಗಿಯೇ ಟೀಕಿಸಿದ್ದ ಯತ್ನಾಳ್ ಅವರು, ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರು ಪಕ್ಷವನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



