BL ಸಂತೋಷ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ರಾಜಕೀಯಕ್ಕಾಗಿ ಸಲಹೆ-ಮಾರ್ಗದರ್ಶನ
ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು.

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ತೆರಳಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಬಿ.ಎಲ್. ಸಂತೋಷ್ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜೀವನ – ಸಾಧನೆ ಕುರಿತ Furrows in a Field: The Unexplored Life of H.D. Deve Gowda ಗ್ರಂಥವನ್ನು ನೀಡಿ ಆಶೀರ್ವಾದ ಪಡೆದುಕೊಂಡ ನಿಖಿಲ್ ಅವರು, ಉಪ ಚುನಾವಣೆ, ಆ ನಂತರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಲವು ಅಂಶಗಳನ್ನು ಅವರ ಗಮನಕ್ಕೆ ತಂದರು. ಚನ್ನಪಟ್ಟಣ ಚುನಾವಣೆಯ ಬಗ್ಗೆ ಸಂತೋಷ್ ಅವರು ಕೆಲ ಮಾಹಿತಿಗಳನ್ನು ನಿಖಿಲ್ ಅವರಿಂದ ಪಡೆದುಕೊಂಡರು ಹಾಗೂ ಮುಂದಿನ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ನಿಖಿಲ್ ಅವರಿಗೆ ಮಹತ್ವದ ಸಲಹೆ ಸೂಚನೆ ಮಾರ್ಗದರ್ಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರು, ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು. ನನ್ನ ರಾಜಕೀಯ ಬೆಳವಣಿಗೆ ಹಾಗೂ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿದರು ಎಂಬುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



