ವ್ಯವಸ್ಥಿತವಾಗಿ JDS ಮುಗಿಸಲು BJP ಸಂಚು: ಸಚಿವ ಕೃಷ್ಣ ಬೈರೇಗೌಡ
ಬಿಜೆಪಿಯು ಜೆಡಿಎಸ್ ಪಕ್ಷವನ್ನು ಮುಗಿಸಲು ವ್ಯವಸ್ಥಿತವಾಗಿ ಸ್ಕೆಚ್ ಹಾಕಿದೆ ಆದರೆ, ನಾನು ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿಯಬೇಕೆಂದು ಅಸೆ ಪಡುತ್ತೇನೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ತ್ರಿಕೋನ ಸ್ಪರ್ಧೆ ಇದ್ದಾಗ 97 ಸಾವಿರ ಮತ ಪಡೆದಿದ್ದರು.

ಮೈಸೂರು: ಜೆಡಿಎಸ್ ಮುಗಿಸುವುದು ಬಿಜೆಪಿಯವರ ಉದ್ದೇಶವಾಗಿದ್ದು, ಅದಕ್ಕಾಗಿ ವ್ಯವಸ್ಥಿತ ರೀತಿಯಲ್ಲಿಯೇ ಸ್ಕೆಚ್ ಹಾಕಿದ್ದಾರೆ. ಭವಿಷ್ಯದಲ್ಲಿ ಜೆಡಿಎಸ್ ಪಕ್ಷವನ್ನು ನುಂಗಿ ಹಾಕುತ್ತಾರೆ. ಆದರೆ, ‘ಜೆಡಿಎಸ್ ಉಳಿಯಬೇಕೆಂದು ಅಸೆಪಡುತ್ತೇನೆ’ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭಾನುವಾರ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಜೆಡಿಎಸ್ ಪಕ್ಷವನ್ನು ಮುಗಿಸಲು ವ್ಯವಸ್ಥಿತವಾಗಿ ಸ್ಕೆಚ್ ಹಾಕಿದೆ ಆದರೆ, ನಾನು ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿಯಬೇಕೆಂದು ಅಸೆ ಪಡುತ್ತೇನೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ತ್ರಿಕೋನ ಸ್ಪರ್ಧೆ ಇದ್ದಾಗ 97 ಸಾವಿರ ಮತ ಪಡೆದಿದ್ದರು. ಬಿಜೆಪಿ-ಜಾತ್ಯತೀತ ಜನತಾದಳ ಒಂದಾದ ಮೇಲೆ 10 ಸಾವಿರ ಮತಗಳಾದರೂ ಹೆಚ್ಚಾಗಬೇಕಿತ್ತು. ಹೇಗೆ 85 ಸಾವಿರ ಮತಗಳಿಗೆ ಇಳಿಯಿತು? ಬಿಜೆಪಿಯ ಮತಗಳು ಎಲ್ಲಿ ಹೋದವು? ಎಂದು ಪ್ರಶ್ನಿಸಿದರು.
ಬಿಜೆಪಿಯ ಒಂದು ಮತವೂ ಜೆಡಿಎಸ್‌ಗೆ ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಕುಮಾರಸ್ವಾಮಿ ಮಗನನ್ನು ಕಣಕ್ಕಿಳಿಸಿ ಮತವನ್ನು ಕಾಂಗ್ರೆಸ್‌ಗೆ ಹಾಕಿಸಿದ್ದಾರೆ. ಬಿಜೆಪಿಯವರು ಜೆಡಿಎಸ್ ಬೆನ್ನಿಗೆ ಚೂರಿ ಹಾಕಿದ್ದಾರೆ. 25 ಸಾವಿರ ಮತಗಳಿಂದ ಯೋಗೇಶ್ವರ್ ಗೆಲ್ಲಬೇಕಾದರೆ ಯಾವ್ಯಾವ ಮೂಲೆಯಿಂದ ಸಹಾಯ ಬಂದಿದೆ ನೀವೆ ಆಲೋಚನೆ ಮಾಡಿ. ಯೋಗೇಶ್ವರ್ ಗೆಲುವಿಗೆ ಬಿಜೆಪಿ ಪರೋಕ್ಷವಾಗಿ ಸಹಾಯ ಮಾಡಿದೆ. ಬಿಜೆಪಿಯ ಉದ್ದೇಶ ಜನತದಾಳವನ್ನು ಮುಗಿಸುವುದೇ ಆಗಿದೆ. ಭವಿಷ್ಯದಲಿ ಜೆಡಿಎಸ್ ಪಕ್ಷವನ್ನು ನುಂಗಿ ಹಾಕುತ್ತದೆ ಎಂದು ಆರೋಪಿಸಿದರು.
ಸಿಎಂ ಸ್ಥಾನದ ರೇಸ್‌ನಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮಾತನಾಡಿದ, ಯಾರ್ಯಾರ ಜೀವನದಲ್ಲಿ ಏನೇನು ಸಿಗಬೇಕೋ ಅದು ಸಿಕ್ಕೇ ಸಿಗುತ್ತದೆ. ಸರ್ಕಾರ ಮಾಡುತ್ತಿರುವ ಕೆಲಸಗಳ ಬಗ್ಗೆ ಚರ್ಚೆ ಆಗಬೇಕೇ ಹೊರತು, ನಿತ್ಯವೂ ಅಧಿಕಾರದ ಬಗ್ಗೆ ಚರ್ಚೆ ಸರಿಯಲ್ಲ. ರಾಜಕೀಯದಲ್ಲಿ ಕಾಲದಿಂದ ಕಾಲಕ್ಕೆ ಬದಲಾವಣೆಗಳು ಆಗುತ್ತಿರುತ್ತವೆ. ಅಧಿಕಾರ ಶಾಶ್ವತವಲ್ಲ. ಸಮಯ ಬಂದಾಗ ಏನಾಗಬೇಕೋ ಅದು ಆಗುತ್ತದೆ’ ಎಂದುಕ ಹೇಳಿದರು.
ಸಿದ್ದರಾಮಯ್ಯ–ಶಿವಕುಮಾರ್ ನೇತೃತ್ವದಲ್ಲಿ ಜನಪರವಾದ ಕೆಲಸ ಮಾಡುತ್ತಿದ್ದೇವೆ. ಈಚೆಗೆ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೇ ಅದಕ್ಕೆ ಸಾಕ್ಷಿ. ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಅಲ್ಲಿನ ಕುಟುಂಬ ರಾಜಕಾರಣವನ್ನು ಜನರು ಕಡೆಗಣಿಸಿದ್ದಾರೆ. ಜನರಿಗೆ ಕಾಂಗ್ರೆಸ್ ಬಗ್ಗೆ ಒಳ್ಳೆಯ ಭಾವನೆ ಬಂದಿದೆ ಎಂದು ಹೇಳಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



