ಶಾಸಕ ಜಿಎಸ್ ಪಾಟೀಲ್ ಗೆ ಸಚಿವ ಸ್ಥಾನ ಭರವಸೆ ಕೊಟ್ಟ ಸಿಎಂ: ಸಂಪುಟ ಪುನಾರಚನೆ ಚರ್ಚೆ ಮತ್ತೆ ಮುನ್ನೆಲೆಗೆ
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ 200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮುಖ್ಯಮಂತ್ರಿಗಳು ಮಾತನಾಡಿದರು.

ಗದಗ: ರೋಣ ಶಾಸಕರಾದ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡುವ ಸುಳಿವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದು, ಇದರ ಬೆನ್ನಲ್ಲೇ ಇಷ್ಟು ದಿನ ತಣ್ಣಗಾಗಿದ್ದ ಸಂಪುಟ ಪುನಾರಚನೆ ವಿಚಾರ ಮತ್ತೆ ಸದ್ದು ಮಾಡಲು ಆರಂಭಿಸಿದೆ.
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ 200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮುಖ್ಯಮಂತ್ರಿಗಳು ಮಾತನಾಡಿದರು. ಈ ವೇಳೆ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಿದರು.
ಶಾಸಕರಾದ ಜಿ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್‌ನಲ್ಲಿ ಈ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಜೊತೆಗೆ ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆಯೂ ಒತ್ತಾಯಿಸಿದ್ದಾರೆ. ಜಿ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲ ಅರ್ಹತೆಗಳಿವೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಮುಖ್ಯಮಂತ್ರಿಗಳು ಸಚಿವ ಸ್ಥಾನದ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆಗಳು ಆರಂಭವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



