ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು BJP ಒಪ್ಪಿಕೊಳ್ಳಲಿ- ನಮ್ಮ ತಕರಾರಿರಲ್ಲ: ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ!
ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ. ಬಹಳ ಸಂತೋಷ. ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರ? ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರೆ" ಎಂದು ತಿರುಗೇಟು ನೀಡಿದರು.

ಬೆಂಗಳೂರು: ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಸಿ.ಟಿ. ರವಿ ಕೇವಲ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾತ್ರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನ ಮಾತು ಆಡಿದ್ದಾರೆ. ಸದನದಲ್ಲಿ ನಿತ್ಯ ಸುಮಂಗಲಿ ಎಂದು ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ ತಪ್ಪೋ ಎಂದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ" ಎಂದು ತಿಳಿಸಿದರು. ಚಿಕ್ಕಮಗಳೂರು ಜನ ಎಂದರೆ ಸುಸಂಸ್ಕೃತ ಜನ. ಅಂತಹವರ ನಡುವಿನಿಂದ ಇಂತಹ ವ್ಯಕ್ತಿ ಬಂದಿರುವುದು ದುರಂತ" ಎಂದರು. ನಮ್ಮ ಪಕ್ಷದ ಯಾವುದೇ ನಾಯಕರು ಈ ರೀತಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ. ಆದರೆ ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೆ. ಮುನಿರತ್ನ ಪ್ರಕರಣ ಇದೇ ಆರ್.ಅಶೋಕ್ ಏನು ಹೇಳಿದ್ದರು? ಎಫ್ ಎಸ್ ಎಲ್ ವರದಿಯಲ್ಲಿ ಸತ್ಯಾಂಶ ಬಂದ ನಂತರ ಪಕ್ಷದಿಂದ ಹೊರಹಾಕುವುದಾಗಿ ಹೇಳಿದ್ದರು. ಈ ಪ್ರಕರಣದಲ್ಲಿ ಅವರು ಒಂದು ಭಾಗವಾಗಿದ್ದರೂ ಆತನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೇ ಅವರ ನಾಯಕತ್ವ. ಅವರ ಮುತ್ತು ರತ್ನಗಳನ್ನು ಅವರೇ ಇಟ್ಟುಕೊಳ್ಳಲಿ" ಎಂದು ಕಿಡಿಕಾರಿದರು.
ಸಿ.ಟಿ. ರವಿ ಅವರನ್ನು ರಾತ್ರಿಯಿಡೀ ಪೊಲೀಸರು ಸುತ್ತಾಡಿಸಿದರು ಎಂದು ನಿಮ್ಮ ವಿರುದ್ಧ ಬೆಟ್ಟು ಮಾಡಿ ತೋರುತ್ತಿದ್ದಾರೆ ಎಂದು ಕೇಳಿದಾಗ, "ಈ ವಿಚಾರದಲ್ಲಿ ನೀವುಂಟು, ಪೊಲೀಸ್ ಉಂಟು. ಅವರ ಮನೆಯಲ್ಲಿ ಏನಾದರೂ ನಾನೇ ಕಾರಣ. ಅವರ ಪಕ್ಷದಲ್ಲಿ ಏನಾದರೂ ನಾನೇ ಕಾರಣ. ಹೊರಗಡೆ ಏನಾದರೂ ನಾನೇ ಕಾರಣ. ನನ್ನ ಸ್ಮರಿಸದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ" ಎಂದು ತಿಳಿಸಿದರು. ನಿಂದನಾತ್ಮಕ ಮಾತು ಆಡಿಯಾಗಿದೆ ಈಗ ಸರ್ಕಾರ ಹೇಗೆ ನ್ಯಾಯ ಕೊಡಿಸಲಿದೆ ಎಂದು ಕೇಳಿದಾಗ, "ಆತ್ಮಸಾಕ್ಷಿಯೇ ನ್ಯಾಯ ನೀಡುತ್ತದೆ" ಎಂದು ತಿಳಿಸಿದರು. ಇದಕ್ಕೆಲ್ಲ ಕೊನೆಯಾಡುತ್ತೇವೆ ಎಂಬ ಸಿ.ಟಿ ರವಿ ಹೇಳಿಕೆ ಬಗ್ಗೆ ಕೇಳಿದಾಗ, "ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ. ಬಹಳ ಸಂತೋಷ. ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರ? ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರೆ" ಎಂದು ತಿರುಗೇಟು ನೀಡಿದರು.
ಮಾನಹಾನಿಕರ ಪದ ಬಳಕೆ ವಿಚಾರ ಚರ್ಚೆಗೆ ಬದಲು ಬೇರೆ ತಿರುವು ಪಡೆಯಿತಾ ಎಂದು ಕೇಳಿದಾಗ, "ಬಿಜೆಪಿಯವರು ತಮ್ಮ ಹೇಳಿಕೆ ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಆಡಳಿತದಲ್ಲಿ ಪೊಲೀಸರನ್ನು ಹೇಗೆ ಬಳಸಿಕೊಂಡಿದ್ದರು?" ಎಂದು ಮಾರ್ಮಿಕವಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



