ರಾಜಕೀಯ

ಬ್ಯಾನರ್‌ ಗಳಲ್ಲಿ POK ಒಳಗೊಳ್ಳದ ಭಾರತದ ನಕ್ಷೆ : ರಾಷ್ಟ್ರದ್ರೋಹ-ಗಾಂಧಿದ್ರೋಹ ಎಸೆಗಿರುವ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು- ವಿಜಯೇಂದ್ರ

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಬ್ಯಾನರ್‌ ಗಳಲ್ಲಿ POK ಒಳಗೊಳ್ಳದ ಭಾರತದ ನಕ್ಷೆ : ರಾಷ್ಟ್ರದ್ರೋಹ-ಗಾಂಧಿದ್ರೋಹ ಎಸೆಗಿರುವ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು- ವಿಜಯೇಂದ್ರ
ಬಿ.ವೈ. ವಿಜಯೇಂದ್ರ
Published On :

ಬೆಂಗಳೂರು: ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಗುರುವಾರ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಿಒಕೆ ಒಳಗೊಳ್ಳದ ಭಾರತದ ನಕ್ಷೆ ಬ್ಯಾನರ್‌ ಹಾಕಿರುವ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ ಮಹಾತ್ಮನನ್ನು ಸ್ಮರಿಸಲು ಹೊರಟಿರುವುದು ಮಹಾತ್ಮನ ಆತ್ಮಕ್ಕೆ ಇರಿದಂತೆ ಅಲ್ಲವೇ? ಅಖಂಡ ಭಾರತದ ಅಸ್ತಿತ್ವ ಹಾಗೂ ರಾಷ್ಟ್ರ ವಿಭಜನೆಯನ್ನು ತಡೆಯಲು ಕಡೇ ಕ್ಷಣದವರೆಗೂ ಪ್ರಯತ್ನಿಸಿದ ಗಾಂಧಿಯವರನ್ನು ಅಪಮಾನಿಸಲು ಹೊರಟಿರುವ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನದ ನೆನಪಿನ ಕಾರ್ಯಕ್ರಮ, ದೇಶಪ್ರೇಮವನ್ನು ಮೆರೆಯಲೋ, ಅಥವಾ ರಾಷ್ಟ್ರವಿದ್ರೋಹಿ ಶಕ್ತಿಗಳನ್ನು ಓಲೈಸಲೋ? ಅಥವಾ ನಿಮ್ಮ ಮಿತ್ರರಾದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಓಲೈಕೆಗೋ ಎನ್ನುವುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಬೇಕು. ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.