ಕಾಂಗ್ರೆಸ್ ನಲ್ಲಿ ನಕಲಿ ಗಾಂಧಿಗಳು ಮಾತ್ರ ನಾಯಕರು- ಮಿಕ್ಕವರು ಗುಲಾಮರು: ಸಿದ್ದರಾಮಯ್ಯರನ್ನು ಹೇಗೆ ನಡೆಸಿಕೊಳ್ಳಲಿದೆ ಎಂಬುದರ ಟ್ರೈಲರ್!
ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಬಂದಾಗಲೆಲ್ಲಾ ಅದನ್ನು ನಿಭಾಯಿಸಿ 'ಟ್ರಬಲ್ ಶೂಟರ್' ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ಪಕ್ಷ ಒಂದು ಶ್ರದ್ಧಾಂಜಲಿ ಸಭೆ ಕೂಡ ನಡೆಸಲಿಲ್ಲ.

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸಾವಿನಲ್ಲೂ ರಾಜಕೀಯ ಮಾಡಿ ಮೊಸಳೆ ಕಣ್ಣೀರಿಡುತ್ತಿರುವ ಕಾಂಗ್ರೆಸ್ ಪಕ್ಷ ಮನಮೋಹನ್ ಸಿಂಗ್ ಅವರ ರಾಜಕೀಯ ಗುರು, ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹರಾವ್ ಅವರನ್ನ ಹೇಗೆ ನಡೆಸಿಕೊಂಡಿತ್ತು ಎಂದು ದೇಶದ ಜನತೆ ಇನ್ನೂ ಮರೆತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಶೋಕ್, ಎಐಸಿಸಿ ಕಚೇರಿಯಲ್ಲಿ ನರಸಿಂಹ ರಾವ್ ಅವರ ಪಾರ್ಥಿವ ಶರೀರ ಇಡುವುದಿರಲಿ, ನವದೆಹಲಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಸುವುದಕ್ಕೂ ನೆಹರೂ-ಗಾಂಧಿ ಕುಟುಂಬ ಅವಕಾಶ ನೀಡಿಲಿಲ್ಲ. ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದ, ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಬಂದಾಗಲೆಲ್ಲಾ ಅದನ್ನು ನಿಭಾಯಿಸಿ 'ಟ್ರಬಲ್ ಶೂಟರ್' ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ಪಕ್ಷ ಒಂದು ಶ್ರದ್ಧಾಂಜಲಿ ಸಭೆ ಕೂಡ ನಡೆಸಲಿಲ್ಲ. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನರಾದಾಗ ಸೋನಿಯಾ ಗಾಂಧಿ ಅವರು ಕನಿಷ್ಠ ಪಕ್ಷ ಸಂತಾಪವನ್ನೂ ವ್ಯಕ್ತಪಡಿಸಲಿಲ್ಲ.
ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಸನದಲ್ಲಿ ನಡೆಸಲು ಉದ್ದೇಶಿಸಿದ್ದ ಸ್ವಾಭಿಮಾನಿ ಸಮಾವೇಶವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮೂಲಕ ಹೈಜಾಕ್ ಮಾಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾಡಿದ್ದೂ ಸಹ ನೆಹರು-ಗಾಂಧಿ ಪರಿವಾರದ ಕಪಿಮುಷ್ಠಿಯಲ್ಲಿರುವ ಕಾಂಗ್ರೆಸ್ ಪಕ್ಷ ಮುಂದೆ ಸಿದ್ದರಾಮಯ್ಯನವರನ್ನು ಹೇಗೆ ನಡೆಸಿಕೊಳ್ಳಲಿದೆ ಎಂಬುದಕ್ಕೆ ಟ್ರೈಲರ್. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಕಲಿ ಗಾಂಧಿಗಳು ಮಾತ್ರ ನಾಯಕರು. ಮಿಕ್ಕವರೆಲ್ಲರೂ ಗುಲಾಮರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



