ಸುಮಲತಾ ಕಾಂಗ್ರೆಸ್ ಸೇರುವ ಸಾಧ್ಯತೆ; ಜೆಡಿಎಸ್ ಗೆ 6 ಕ್ಷೇತ್ರ ಕೇಳಿದ್ದೇವೆ, ಗೌಡರ ಕುಟುಂಬದಿಂದ ಇಬ್ಬರು ಕಣಕ್ಕೆ: ಜಿ.ಟಿ ದೇವೇಗೌಡ
ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡ ಈಗ ಕಾಂಗ್ರೆಸ್ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್‌ಗೆ ಹೋಗಬಹುದು.

ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡ ಈಗ ಕಾಂಗ್ರೆಸ್ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್‌ಗೆ ಹೋಗಬಹುದು ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಒಂದು ವೇಳೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕಿಳಿದರೆ ಸ್ವಾಗತಿಸುತ್ತೇವೆ. ನಾವು ಸುಮಲತಾ ವಿರುದ್ಧ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.
28 ಲೋಕಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕೇಳಿದ್ದೇವೆ. ಎಚ್.ಡಿ. ದೇವೇಗೌಡರ ಕುಟುಂಬದಿಂದ ಇಬ್ಬರು ಕಣಕ್ಕಿಳಿಯಬಹುದು. ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವರೇ ಅಥವಾ ಇಲ್ಲವೇ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದರು.
ತುಮಕೂರು, ಹಾಸನ, ಮಂಡ್ಯ, ಮೈಸೂರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಉತ್ತರದ ಪೈಕಿ ಆರು ಕ್ಷೇತ್ರಗಳನ್ನು ಕೇಳಿದ್ದೇವೆ. ಬಿಜೆಪಿ ಜೊತೆಗೂಡಿ ನಾವು 28 ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ ಎಂದು ಜಿಟಿ ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೌಡರ ಕುಟುಂಬದಿಂದ ಕುಮಾರಸ್ವಾಮಿ, ಪ್ರಜ್ವಲ್ ಇಬ್ಬರು ಅಭ್ಯರ್ಥಿಗಳು ಆಗಬಹುದು. ನಿಖಿಲ್ ರಾಜ್ಯಾದ್ಯಂತ ಪ್ರವಾಸ ಮಾಡ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ದೌರ್ಜನ್ಯ ದಬ್ಬಾಳಿಕೆ ಜಾಸ್ತಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


