ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನರ ಹಕ್ಕು: ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಈ ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಸೂಚಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಈ ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಸೂಚಿಸಿದ್ದಾರೆ.
ಖಾಸಗಿ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ - ಜೆಡಿಎಸ್ ನವರು ಗ್ಯಾರಂಟಿ ಯೋಜನೆಗಳ 5 ಕೋಟಿ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ನಾವು ಈ ಜನರ ಪರವಾಗಿ ನಿಂತಿದ್ದೇವೆ ಎಂದರು.
ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ ಹೆಮ್ಮೆಯಿಂದ ಮಾತನಾಡಬೇಕು ಎಂದು ಹೇಳಿದರು.
ಶಾಸಕರು ಸದನದಲ್ಲಿ ಪರಿಣಾಮಕಾರಿಯಾಗಿ, ಕಡ್ಡಾಯವಾಗಿ ಭಾಗವಹಿಸುವ ಮೂಲಕ ಸದನದ ಸಮಯವನ್ನು ಅರ್ಥಪೂರ್ಣಗೊಳಿಸಬೇಕು. ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ. ಏಕೆಂದರೆ ಲೋಕಸಭಾ ಚುನಾವಣೆಗೆ ಜನರ ಬಳಿಗೆ ಹೋಗಿ ಮುಖ ತೋರಿಸಲು ಬಿಜೆಪಿಗೆ ಅಭಿವೃದ್ಧಿ ವಿಚಾರಗಳೇ ಇಲ್ಲ ಎಂದು ಟೀಕಿಸಿದರು.
ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯನ್ನು ಮರೆತು ಈಗ ಚುನಾವಣೆ ವೇಳೆ ಅಯೋಧ್ಯೆ ವಿಚಾರ ಒಂದನ್ನೇ ಮುಂದಿಟ್ಟುಕೊಂಡು ಹೊರಟಿದ್ದಾರೆ. ಈ ಸತ್ಯ ನಾಡಿನ ಜನತೆಗೆ ಮನವರಿಕೆಯಾಗಿದೆ. ಆದರೆ ಸದನದ ಕಡತಕ್ಕೆ ಹೋಗಲಿ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಇದಕ್ಕೆ ನಮ್ಮ ಪಕ್ಷದ ಶಾಸಕರು ಸತ್ಯದ ಮೂಲಕ, ಅಧಿಕೃತ ಅಂಕಿ ಅಂಶಗಳ ಮೂಲಕ ಸ್ಪಷ್ಟ ಉತ್ತರ ಕೊಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


