ಬಿಜೆಪಿ ಕುರಿತು ಗೂಂಡಾಗಿರಿ ಹೇಳಿಕೆ: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು- ಕೋಟಾ ಶ್ರೀನಿವಾಸ ಪೂಜಾರಿ
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ನಾಯಕರ ಕುರಿತು ಗೂಂಡಾಗಿರಿ ಮಾಡ್ತೀರಾ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಬಿಜೆಪಿ ನಾಯಕರ ಕುರಿತು ಗೂಂಡಾಗಿರಿ ಮಾಡ್ತೀರಾ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾರಿ, ''ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರನ್ನು ಗೂಂಡಾಗಳು ಎಂದು ಕರೆದಿದ್ದಾರೆ, ಅವರು ಕ್ಷಮೆ ಕೇಳಬೇಕು. ಈ ಹೇಳಿಕೆಗೆ ಜನರು ಸೂಕ್ತ ಉತ್ತರ ನೀಡುತ್ತಾರೆ.
ನಾಲ್ಕೈದು ನಿಮಿಷದಲ್ಲಿ ಉತ್ತರಿಸಬಹುದಾಗಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸುವಾಗ ಗಂಟೆಗಟ್ಟಲೆ ಕೇಂದ್ರವನ್ನು ಟೀಕಿಸಿ ಆಕ್ಷೇಪ ವ್ಯಕ್ತಪಡಿಸಿದರು. ಅವರು ಉತ್ತರಿಸುವ ಬದಲು ಎಲ್ಲ ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳು ಎಂದು ಕರೆದಿದ್ದಾರೆ ಎಂದು ಹೇಳಿದರು.

ವಿಧಾನಸಭೆ ಕಲಾಪ: ಅಕ್ರಮ ಮದ್ಯ ಮಾರಾಟದಲ್ಲಿ ಅಬಕಾರಿ ಅಧಿಕಾರಿಗಳೂ ಕೈಜೋಡಿಸಿದ್ದಾರೆ- ಕ್ರಮಕ್ಕೆ ಶಾಸಕರ ಆಗ್ರಹ
“ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರು ‘ಗೂಂಡಾ’ ಪದವನ್ನು ಬಳಸಿರುವುದನ್ನು ನಾನು ನೋಡಿಲ್ಲ. ಅವರು ತಮ್ಮ ಮಾತನ್ನು ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದೇವೆ. ಸಿಎಂ ಹೇಳಿಕೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು ಎಂದು ಪೂಜಾರಿ ವಿವರಿಸಿದರು.
ತೆರಿಗೆ ಹಂಚಿಕೆ ಕುರಿತು ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸುತ್ತಿದ್ದಾಗ ಗೊಂದಲ ಶುರುವಾಯಿತು. ದೇಶದಲ್ಲಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ, ಆದರೆ ಪ್ರತಿಯಾಗಿ ಕೇಂದ್ರದಿಂದ ರಾಜ್ಯದ ಪಾಲು ಕಡಿಮೆಯಾಗುತ್ತಿದೆ. ಕೇಂದ್ರ ಬಜೆಟ್‌ನ ಗಾತ್ರ ದ್ವಿಗುಣಗೊಂಡಿದ್ದರೂ ಕರ್ನಾಟಕದ ಪಾಲು ಹೆಚ್ಚಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ತಮ್ಮ ಭಾಷಣವನ್ನು ಪೂರ್ಣಗೊಳಿಸಿದ ನಂತರ ಮಾತನಾಡಲು ಬಿಜೆಪಿ ಸದಸ್ಯರನ್ನು ಕೇಳಿದರು, ಆದರೆ ಅವರು ತಮ್ಮ ಆಕ್ಷೇಪವನ್ನು ಮುಂದುವರಿಸಿದಾಗ, ನಾನು ಗೂಂಡಾಗಿರಿಗೆ ಹೆದರುವುದಿಲ್ಲ. ಏಳು ಕೋಟಿ ಜನ ವೀಕ್ಷಿಸುತ್ತಿದ್ದಾರೆ. ನೀವು ಎದ್ದು ನಿಂತಿದ್ದರೆ, ನೀವು ತಪ್ಪು ಮಾಡಿದ್ದೀರಿ ಎಂದರ್ಥ ಎಂದು ವಾಕ್ಸಮರ ನಡೆಸಿದರು.ಗೊಂದಲದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಯಿತು.
ಈ ಹಿಂದೆ ಪ್ರತಿಪಕ್ಷಗಳನ್ನು ಹೋರಾಟಕ್ಕೆ ಆಹ್ವಾನಿಸುವ ಇಂಗಿತ ವ್ಯಕ್ತಪಡಿಸಿದವರು ಯಾರು ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ ಕೋಟ ಶ್ರೀನಿವಾಸ ಪೂಜಾರಿ, ಈಗ ನೀವು ನಮ್ಮ ವಿರುದ್ಧ ಗೂಂಡಾಗಿರಿ ಆರೋಪ ಮಾಡುತ್ತಿದ್ದೀರಿ ಎಂದು ಹೇಳಿದರು. ಸಿಟ್ಟಿಗೆದ್ದ ಸಿದ್ದರಾಮಯ್ಯ, ''ನೀವು ಗೂಂಡಾಗಳು. ನಾನು ನಿಮಗೆ ಹೆದರುವುದಿಲ್ಲ. ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಜನರು ನಿಮ್ಮನ್ನು ಶಪಿಸುತ್ತಿದ್ದಾರೆ. ನನ್ನ ತೆರಿಗೆ ನನ್ನ ಹಕ್ಕು ಎಂದು ಕಿಡಿಕಾರಿದರು.
ಬಿಜೆಪಿ ಸದಸ್ಯರು ಗೂಂಡಾ ಕಾಂಗ್ರೆಸ್ ಸರ್ಕಾರ ಎಂದು ಘೋಷಣೆಗಳನ್ನು ಕೂಗಲಾರಂಭಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


