ಲೋಕಸಭೆ ಚುನಾವಣೆಗೆ ಸಿದ್ಧತೆ: ಮಂಗಳೂರಿನಲ್ಲಿ ಇಂದು ಬೃಹತ್ ಕಾಂಗ್ರೆಸ್ ಸಮಾವೇಶ
ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ

ಮಂಗಳೂರು: ಅತ್ತ ದೆಹಲಿಯಲ್ಲಿ ಶನಿವಾರ ಮತ್ತು ನಾಳೆ ಭಾನುವಾರ ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ನಡೆಸುತ್ತಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಅದು ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಆಗಿದೆ.
ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು ಮಧ್ಯಾಹ್ನ ಕಾಂಗ್ರೆಸ್ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸುವ ಸಲುವಾಗಿ ಈ ಸಮಾವೇಶ ಆಯೋಜಿಸಲಾಗಿದೆ.
ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿ ಹಲವು ನಾಯಕರು ಭಾಗಿ: ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಲ್ಲಾ ಸಚಿವರು, ಸಂಸದರರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು ಸೇರಿದಂತೆ ಮುಂಚೂಣಿ ಘಟಕದ ಎಲ್ಲಾ ಹಂತದ ಅಧ್ಯಕ್ಷರು ಕಡ್ಡಾಯ ಭಾಗಿಗೆ ಸೂಚನೆ ನೀಡಲಾಗಿದೆ.

ಲೋಕಸಭೆ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕುವುದು ಕಾಂಗ್ರೆಸ್ ಗೆ ತಲೆನೋವು, ಬಿಜೆಪಿಯ ಮುಂದಿನ ಸವಾಲುಗಳೇನು?
ಡ್ರೋನ್ ಹಾರಾಟಕ್ಕೆ ನಿಷೇಧ: ಇಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ. ಕಾರ್ಯಕ್ರಮದ ಬಳಿಕ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿರುವ ಹಿನ್ನಲೆ ವಾಮಂಜೂರಿನ ತಿರುವೈಲಿನಲ್ಲಿ ಕಂಬಳ ಕಾರ್ಯಕ್ರಮದ ಸುತ್ತಮುತ್ತಲೂ 5 ಕಿ.ಮೀ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಡ್ರೋನ್ ಹಾರಾಟ ನಿರ್ಬಂಧಿಸಲಾಗಿದೆ.
ಸಂಚಾರ ಬದಲಾವಣೆ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಪ್ರಮುಖವಾಗಿ ಸಂಚಾರ ಬದಲಾವಣೆ ಮಾಡಲಾಗಿದೆ. ಬಿಸಿ ರೋಡ್‌ನಿಂದ ಮಂಗಳೂರಿಗೆ ಬರುವ ವಾಹನಗಳು ಬಿಸಿ ರೋಡ್-ಪಾಣೆಮಂಗಳೂರು-ಮುಡಿಪು-ಪಂಪ್ವೆಲ್ ಮಾರ್ಗವಾಗಿ ಮಂಗಳೂರಿಗೆ ತೆರಳಲು ಪೊಲೀಸರು ಸೂಚನೆ ನೀಡಿದ್ದಾರೆ.
ಮಂಗಳೂರಿನಿಂದ ಹೊರಗೆ ಹೋಗುವ ವಾಹನಗಳಿಗೂ ಮುಡಿಪು-ಪಾಣೆಮಂಗಳೂರು ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಒಂಬತ್ತು ಗಂಟೆಯಿಂದ ಮಾರ್ಗ ಬದಲಾಯಿಸುವಂತೆ ಮಂಗಳೂರು ಪೊಲೀಸ್ ಕಮೀಷನರ್ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


