ರಾಜಕೀಯ

ಮಾಜಿ ಸಂಸದ ಮುದ್ದಹನುಮೇಗೌಡ‌ ಇಂದು ಕಾಂಗ್ರೆಸ್ ಸೇರ್ಪಡೆ

ಲೋಕಸಭಾ ಚುನಾವಣೆ ಹೊತ್ತಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ‌ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

ಮಾಜಿ ಸಂಸದ ಮುದ್ದಹನುಮೇಗೌಡ‌ ಇಂದು ಕಾಂಗ್ರೆಸ್ ಸೇರ್ಪಡೆ
ಸಿಎಂ ಸಿದ್ದರಾಮಯ್ಯ ಜೊತೆ ಮುದ್ದಹನುಮೇಗೌಡ (ಸಂಗ್ರಹ ಚಿತ್ರ)
Published On :

ತುಮಕೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ‌ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಇಂದು ಸಂಜೆ‌ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ‌ ಸಮ್ಮುಖದಲ್ಲಿ ಕೈಪಡೆ ಸೇರ್ಪಡೆ ಆಗಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮುದ್ದಹನುಮೇಗೌಡ‌ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲೂ ವಿಧಾನಸಭಾ ಟಿಕೆಟ್ ವಂಚಿತರಾಗಿದ್ದರು. ಇದೀಗ ಬಿಜೆಪಿಯಿಂದ ತುಮಕೂರು ಲೋಕಸಭಾ ಚುನಾವಣೆಗೆ ಪ್ರಬಲ ಟಿಕೆಟ್ ಅಕಾಂಕ್ಷಿ ಆಗಿದ್ದ ಮುದ್ದಹನುಮೇಗೌಡ‌ ಟಿಕೆಟ್ ಕೈ ತಪ್ಪುವ ಭೀತಿ ಹಿನ್ನೆಲೆ ಮತ್ತೆ ಮಾತೃ ಪಕ್ಷ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.