ರಾಜಕೀಯ

ಸಂಸದೆ ಸುಮಲತಾ ಮುಂದಿನ ನಡೆಯೇನು?: ಇಂದು ಆಪ್ತರ ಜೊತೆ ಮಹತ್ವದ ಸಭೆ

ಮಂಡ್ಯ ಲೋಕಸಭಾ ಚುನಾವಣೆ ಸ್ಪರ್ಧೆ ಚರ್ಚೆ

ಸಂಸದೆ ಸುಮಲತಾ ಮುಂದಿನ ನಡೆಯೇನು?: ಇಂದು ಆಪ್ತರ ಜೊತೆ ಮಹತ್ವದ ಸಭೆ
ಸಂಸದೆ ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)
Published On :

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್ ಅವರ ಮುಂದಿನ ರಾಜಕೀಯ ನಡೆ ಕುತೂಹಲವಾಗಿದೆ. ಇತ್ತ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲು ಸುಮಲತಾ ಸುತಾರಂ ತಯಾರಿಲ್ಲ, ಅತ್ತ ಜೆಡಿಎಸ್ ಟಿಕೆಟ್ ಗಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್ ಮುಂದೆ ಗಟ್ಟಿಯಾಗಿ ತಮ್ಮ ಪರವಾಗಿ ಬೇಡಿಕೆ ಮಂಡಿಸಿದ್ದಾರೆ.

ಇಂದು ಸುಮಲತಾ ಮಹತ್ವದ ಸಭೆ: ಸುಮಲತಾ ಅವರು ಮಂಡ್ಯ ಬಿಟ್ಟು ಹೋಗುವುದಿಲ್ಲ, ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿಯೇ ಸ್ಪರ್ಧಿಸಲಿದ್ದಾರೆ ಎಂದು ಅವರ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ.

ಆಪ್ತರ ಹೇಳಿಕೆ ಬೆನ್ನಲ್ಲೇ ಇಂದು ಸುಮಲತಾ ಅವರು ಬೆಂಗಳೂರಿನ ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸಾಯಂಕಾಲ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸುಮಲತಾ ಆಪ್ತರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ತಮಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವನ್ನು ಹೇಗೆ ಒಲಿಸಬೇಕು, ಒಂದು ವೇಳೆ ಟಿಕೆಟ್ ಸಿಗದೇ ಇದ್ದರೆ ಏನು ಮಾಡಬೇಕೆಂದು ಸಂಸದೆ ಆಪ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ಈ ಸಭೆ ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆಗೂ ಸಹ ಗ್ರಾಸವಾಗಿದೆ.

ಸುಮಲತಾ ಅವರ ನಡೆ ದಳಪತಿಗಳಿಗೆ ತಲೆನೋವಾಗಿದ್ದು, ಬಿಜೆಪಿ ಹೈಕಮಾಂಡ್‌ಗೂ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.