ರಾಜ್ಯಸಭಾ ಚುನಾವಣೆ: ಅಡ್ಡ ಮತದಾನದ ಭೀತಿ; ಬಿಜೆಪಿ- ಜೆಡಿಎಸ್ಗೆ ತಲೆನೋವಾದ ಶಾಸಕ ಶಿವರಾಮ್ ಹೆಬ್ಬಾರ್!
ಮಂಗಳವಾರ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಜೆಡಿಎಸ್-ಬಿಜೆಪಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪರ ಮತ ಹಾಕಲು ನಿರಾಕರಿಸಿದ ಮಾಜಿ ಸಚಿವ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಕಾರವಾರ: ಮಂಗಳವಾರ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಜೆಡಿಎಸ್-ಬಿಜೆಪಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪರ ಮತ ಹಾಕಲು ನಿರಾಕರಿಸಿದ ಮಾಜಿ ಸಚಿವ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದ್ದು, ಅಡ್ಡ ಮತದಾನ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಪಕ್ಷದ ಮೂಲಗಳು ಹೆಬ್ಬಾರ್ ಅವರೊಂದಿಗೆ ಸಂಪರ್ಕದಲ್ಲಿವೆ. ಹೆಬ್ಬಾರ್ ಅವರು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಸರಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಜೊತೆಗೆ ಜೆಡಿಎಸ್ನ ಐವರು ರಾಜ್ಯಸಭಾ ಸದಸ್ಯರ ಗೆಲುವನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಅದಕ್ಕೆ ಅಡ್ಡಿಯಾಗಿರುವುದು ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಅಡ್ಡ ಮತದಾನ ಮಾಡುವ ಶಂಕೆ ವ್ಯಕ್ತವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ ಎಂದು ಹೆಬ್ಬಾರ್ ಅವರು ರಾಜ್ಯದ ಪಕ್ಷದ ವರಿಷ್ಠರಿಗೆ ಪರೋಕ್ಷವಾಗಿ ಹೇಳಿದ್ದಾರೆ ಎನ್ನಲಾಗಿದ್ದು, ಇದನ್ನು ಪರಿಗಣಿಸಿ ಬಿಜೆಪಿಯ ಮತ್ತೋರ್ವ ಅಭ್ಯರ್ಥಿ ನಾರಾಯಣ ಬಂಡಿಗೆ ಅವರಿಗೆ ಮತ ಹಾಕುವಂತೆ ಪಕ್ಷ ತಿಳಿಸಿದೆ ಎನ್ನಲಾಗಿದೆ.
ಆದಾಗ್ಯೂ, ಅವರು ಅಡ್ಡ ಮತದಾನ ಮಾಡಬಹುದು ಎಂದೇ ಪಕ್ಷ ಭಾವಿಸಿದ್ದು, ಅವರ ಮೇಲೆ ನಿಗಾ ವಹಿಸಿದೆ. ಯಾವುದೇ ರೀತಿಯ ಅಡ್ಡ ಮತದಾನ ನಡೆಯುವುದನ್ನು ತಡೆಯಲು ಬಿಜೆಪಿ ಮೂರು ತಂಡಗಳನ್ನು ರಚಿಸಿದ್ದು, ಮತದಾನದ ದಿನದ ಮೇಲೆ ನಿಗಾ ಇರಿಸಿದೆ.
ಹೆಬ್ಬಾರ್ ಅವರನ್ನು ಸಂಪರ್ಕಿಸಿದಾಗ, ತಾವು ಅಡ್ಡ ಮತದಾನ ಮಾಡುವ ವರದಿಗಳನ್ನು ವದಂತಿ ಎಂದು ಬಣ್ಣಿಸಿದರು. 'ನೀವು ಏನನ್ನು ಕೇಳಿಸಿಕೊಂಡಿದ್ದೀರಿ ಮತ್ತು ವರದಿ ಮಾಡಿದ್ದೀರಿ ಅದು ಸತ್ಯಕ್ಕೆ ದೂರವಾಗಿದೆ. ನಾಳೆ (ಮಂಗಳವಾರ) ಸಂಜೆಯ ವೇಳೆಗೆ ನಿಮಗೆ ಅದರ ಬಗ್ಗೆ ತಿಳಿಯುತ್ತದೆ' ಎಂದು ಅವರು ಟಿಎನ್ಐಇಗೆ ತಿಳಿಸಿದರು.
ಹೆಬ್ಬಾರ್ ಅವರು 2019ರಲ್ಲಿ ಎಸ್ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ, ಬೈರತಿ ಬಸವರಾಜ್, ಡಿ ಸುಧಾಕರ್, ಬಿಸಿ ಪಾಟೀಲ್ ಮತ್ತು ಇತರರೊಂದಿಗೆ ಕಾಂಗ್ರೆಸ್ನಿಂದ ಬಿಜೆಪಿ ಸೇರಿದರು. ಯಡಿಯೂರಪ್ಪ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದರು. ಯಡಿಯೂರಪ್ಪ ಬದಲಿಗೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗಲೂ ಅವರು ಅದೇ ಖಾತೆಯಲ್ಲಿ ಮುಂದುವರಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



