ಇಂಡಿಯಾ ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಫಲಪ್ರದವಾಗಲಿದೆ: ಮಲ್ಲಿಕಾರ್ಜುನ ಖರ್ಗೆ
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಾಲುದಾರ ಪಕ್ಷಗಳ ನಡುವಿನ ಸೀಟು ಹಂಚಿಕೆಯು ಫಲಪ್ರದವಾಗುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಾಲುದಾರ ಪಕ್ಷಗಳ ನಡುವಿನ ಸೀಟು ಹಂಚಿಕೆಯು ಫಲಪ್ರದವಾಗುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.
ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಸುರಪುರಕ್ಕೆ ತೆರಳುವ ಮುನ್ನ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಖರ್ಗೆ ಮಾತನಾಡಿದರು.
'ನಮ್ಮ ವಿರೋಧಿಗಳು I.N.D.I.A ಮೈತ್ರಿಕೂಟದ ಬಗ್ಗೆ ಏನು ಬೇಕಾದರೂ ಹೇಳಬಹುದು. ನಾವು ಆಶಾವಾದಿಗಳಾಗಿದ್ದೇವೆ' ಎಂದು ಅವರು ಹೇಳಿದರು.
ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷದೊಂದಿಗೆ ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಇದರೊಂದಿಗೆ ಜಾರ್ಖಂಡ್ ಮುಕ್ತಿ ಮೋರ್ಚಾ, ಆರ್‌ಜೆಡಿ, ಡಿಎಂಕೆ ಮತ್ತು ಮುಸ್ಲಿಂ ಲೀಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಅದಿನ್ನೂ ಪ್ರಕಟವಾಗಬೇಕಿದೆ ಎಂದು ಹೇಳಿದರು.
'ಕಠಿಣ ಹೋರಾಟವನ್ನು ನೀಡಲು ನಾವು ಕೊನೆಯ ಕ್ಷಣದವರೆಗೂ I.N.D.I.A ಮೈತ್ರಿಕೂಟದ ಎಲ್ಲಾ ಪಾಲುದಾರ ಪಕ್ಷಗಳೊಂದಿಗೆ ಚರ್ಚೆ ನಡೆಸುತ್ತೇವೆ. ಸರ್ವಾಧಿಕಾರದತ್ತ ಸಾಗುತ್ತಿರುವ ಎನ್‌ಡಿಎ ಒಕ್ಕೂಟಕ್ಕೆ ದೇಶದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



