ಸೋಲು-ಗೆಲುವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ
ಸೋಲು-ಗೆಲವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಸೋಲು-ಗೆಲವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.
ರಾಜ್ಯಸಭಾ ಚುನಾವಣೆಯಲ್ಲಿ ಮಂಗಳವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ನಮ್ಮ ಶಾಸಕರ ಒಗ್ಗಟ್ಟನ್ನು ಒಡೆಯಲು ನಡೆಸಿದ ಪ್ರಯತ್ನಗಳನ್ನು ವಿಫಲಗೊಳಿಸುವುದಕ್ಕಾಗಿ ಡಿ. ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ. ಶರಣಗೌಡ ಕಂದಕೂರ ನಮ್ಮ ಕುಟುಂಬದ ಸದಸ್ಯ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂಬ ಸಂದೇಶ ರವಾನಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.
ತಮ್ಮ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಆಮಿಷ ಒಡ್ಡಿದ್ದರು ಎಂಬ ಕಾಂಗ್ರೆಸ್ ಆರೋಪದ ಕುರಿತು ಪ್ರತಿಕ್ರಿಯಿಸಿ, 'ಆಮಿಷ ಒಡ್ಡುವುದು, ಧಮ್ಕಿ ಹಾಕುವುದು ಕಾಂಗ್ರೆಸ್ ಸಂಸ್ಕೃತಿ ಎಂದು ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


