ರಾಜಕೀಯ

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ — ANI
Published On :

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ಬಿಜೆಪಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆದರೆ, ಅದನ್ನು ಪರೀಕ್ಷಿಸುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಆದರೆ ಏನು ನಡೆದಿಲ್ಲ ಎಂದು ಅವರು ಹೇಳುತ್ತಿದ್ದು, ತನಿಖೆಗೂ ಮುನ್ನವೇ ಕ್ಲಿನ್ ಚೀಟ್ ನೀಡಿದ್ದಾರೆ. ಈ ಪ್ರಕರಣವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.