'ಅವಿವೇಕಿ ಆಂಜನೇಯಪ್ಪನ ಪೂಜ್ಯ ದೇವರಾದ ಸಿದ್ದರಾಮಯ್ಯಗೆ ಸಕಲ ರೀತಿಯಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿ'
ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು,ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ !!! ಆಂಜನೇಯಪ್ಪ ನವರ ಪೂಜ್ಯ ದೇವರಾದ ಸಿದ್ದರಾಮಯ್ಯ ನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಯತ್ನಾಳ್ ಕಿಡಿ ಕಾರಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಆಂಜನೇಯ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


