ರಾಜಕೀಯ

ಮೂವರು ಉಪ ಮುಖ್ಯಮಂತ್ರಿ ಬೇಡಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ: ಡಿ ಕೆ ಶಿವಕುಮಾರ್

ರಾಜ್ಯದಲ್ಲಿ ಮೂವರು ಸಚಿವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಉಪ ಮುಖ್ಯಮಂತ್ರಿ...

ಮೂವರು ಉಪ ಮುಖ್ಯಮಂತ್ರಿ ಬೇಡಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ: ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್
Published On :

ಬೆಂಗಳೂರು: ರಾಜ್ಯದಲ್ಲಿ ಮೂವರು ಸಚಿವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ಕೇವಲ ಒಬ್ಬರ ಬದಲು ಮೂವರು ಉಪಮುಖ್ಯಮಂತ್ರಿಗಳಾಗಬೇಕು ಎಂದು ಪಟ್ಟು ಹಿಡಿದಿರುವ ರಾಜಣ್ಣ, ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಏಕೈಕ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂತಹ ಪ್ರಶ್ನೆಗಳಿಗೆ ಹೈಕಮಾಂಡ್ ಮಾತ್ರ ಉತ್ತರಿಸಬಲ್ಲದು. ನಾನು ಅದಕ್ಕೆ ಉತ್ತರಿಸಲಾರೆ. ಅದು ಚರ್ಚಿಸಬೇಕಾದ ವಿಷಯವಲ್ಲ. ಲೋಕಸಭೆ ಚುನಾವಣೆ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಅಷ್ಟೆ ಎಂದಿದ್ದಾರೆ.

ಇನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಕೂಡ ಇದು ರಾಜಣ್ಣನವರ ವೈಯಕ್ತಿಕ ದೃಷ್ಟಿಕೋನವೇ ಹೊರತು ಪಕ್ಷದದ್ದಲ್ಲ. ಜನ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ ಎಂದು ಹೇಳಿದ್ದಾರೆ. 

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು, ರಾಜಣ್ಣ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ರಾಜಣ್ಣ ಅವರು ಹಿರಿಯ ನಾಯಕರಾಗಿದ್ದು, ರಾಜಕೀಯ ದೃಷ್ಠಿಯಿಂದ ಅವರು ಹಲವು ಡಿಸಿಎಂ ಹುದ್ದೆ ಬಗ್ಗೆ ಮಾತನಾಡಿದ್ದಾರೆ. ಅವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೇ ಎಂಬುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.