ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಗೆಲ್ಲೋದು ಗ್ಯಾರಂಟಿ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ ಪ್ರದೀಪ್ ಈಶ್ವರ್
2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ.

ಚಿಕ್ಕಬಳ್ಳಾಪುರ: 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ.
ಈ ಮಧ್ಯೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಬೈಯುವ ಭರದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರದೀಪ್ ಈಶ್ವರ್ ಅವರು, ಸಂಸದ ಪ್ರತಾಪ್ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್, ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.
ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ನೀವು ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.
ಇದರೊಂದಿಗೆ ಈ ಬಾರಿ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿಗೆ ಈಗ ರೆಕ್ಕೆಪುಕ್ಕ ಬಂದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


