ರಾಜಕೀಯ

ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ: ಕಾನೂನು ಸಮರಕ್ಕೆ ಬಿಜೆಪಿ ಮುಂದು!

ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ ನೀಡುವ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ಧರಾಮಯ್ಯ ಅವರು ಬುಧವಾರ ಘೋಷಣೆ ಮಾಡಿದ್ದು, ಸರ್ಕಾರ ಈ ನಿರ್ಧಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.

ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ: ಕಾನೂನು ಸಮರಕ್ಕೆ ಬಿಜೆಪಿ ಮುಂದು!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ ನೀಡುವ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ಧರಾಮಯ್ಯ ಅವರು ಬುಧವಾರ ಘೋಷಣೆ ಮಾಡಿದ್ದು, ಸರ್ಕಾರ ಈ ನಿರ್ಧಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗ್ರಾಮ ಲೆಕ್ಕಿಗರಿಂದ ಹಿಡಿದು ಜಿಲ್ಲಾಧಿಕಾರಿ, ಮುಖ್ಯ ಕಾರ್ಯದರ್ಶಿವರೆಗೆ ವ್ಯವಸ್ಥೆ ಇದ್ದರೂ ಸರ್ಕಾರ ಗ್ಯಾರಂಟಿ ಯೋಜನೆಗಳ ಅಧಿಕಾರವನ್ನು ಪಕ್ಷದ ಕಾರ್ಯಕರ್ತರಿಗೆ ನೀಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ಕುರಿತು ಮಾತನಾಡಿ, ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ತಾಳಿದ್ದಾರೆಂದು ಪ್ರಶ್ನಿಸಿದರು.

ನೈತಿಕ ಪೊಲೀಸ್‌ಗಿರಿ ಮಾಡಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ಅಲ್ಪಸಂಖ್ಯಾತ ಮಹಿಳೆಯ ಮೇಲೆಯೇ ದೌರ್ಜನ್ಯ ಆಗಿದೆ‌. ಅವರಿಗೆ ರಕ್ಷಣೆ ಕೊಡಲು ಆಗುತ್ತಿಲ್ಲ. ಈ ಪ್ರಕರಣದಲ್ಲಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ನಿಲುವು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಅಲ್ಪಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆಗಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಪೊಲೀಸರು ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು. ವಿಭಿನ್ನ ಕೋಮಿನವರು ಒಂದು ರೂಮಿನಲ್ಲಿ ಇದ್ದಾಗ ಅವರ ಮೇಲೆ ಹಲ್ಲೆಯಾಗಿದೆ. ಗ್ಯಾಂಗ್ ರೇಪ್ ಆಗಿದೆ ಎಂಬ ಆರೋಪ ಇದೆ. ಈ ಬಗ್ಗೆ ಹಾವೇರಿ ಪೊಲೀಸ್ ವರಿಷ್ಠರ ಜೊತೆ ಮಾತನಾಡಿದ್ದೇನೆ‌. ಅವರು ಅದನ್ನು ಅಲ್ಲಗಳೆಯುತ್ತಿದ್ದಾರೆ. ಆದರೆ, ತಕ್ಷಣ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.