ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯಕೆಡಿಸುವ ಕೆಟ್ಟ ಹುಳು ಇದ್ದಂತೆ: ದಿನೇಶ್ ಗುಂಡೂರಾವ್
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಮಗನೇ' ಎಂದು ಸಂಬೋಧಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಮಗನೇ' ಎಂದು ಸಂಬೋಧಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದು, 'ಕುಲವಂ ನಾಲಗೆ ನುಡಿಯಿತು' ಎಂಬಂತೆ ಉತ್ತರ ಕನ್ನಡ ಸಂಸದರ ಸಂಸ್ಕಾರ ಅವರ ಮಾತುಗಳಲ್ಲೇ ತಿಳಿಯುತ್ತದೆ. ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ. ಶೋಷಿತ ಸಮುದಾಯದ ದ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ 'ಮಗನೇ' ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣ ಮಾಡಿದೆ ಎಂದು ಕಿಡಿಕಾರಿದ್ದಾರೆ.
ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ.ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.? ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ. ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.? ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು. ಬಸವಣ್ಣ, ಕುವೆಂಪು, ನಾರಾಯಣ ಗುರು ಹಾಗೂ ಕನಕದಾಸರಂತಹ ಅನೇಕ ಮಹಾನ್ ವ್ಯಕ್ತಿಗಳು ಬದುಕಿ ಬಾಳಿದ ನೆಲವಿದು. ನಿಮ್ಮ ಕೊಳಕು ಮಾತುಗಳಿಂದ ಈ ನೆಲದ ಪಾವಿತ್ರ್ಯವನ್ನು ಹಾಳು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


