ರಾಮಮಂದಿರಕ್ಕೆ ಹೋಗಿ ಪಾಪ ತೊಳೆದುಕೊಂಡು ಬನ್ನಿ: ಸಿಎಂ ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ಳುತ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ಳುತ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಅನಂತಕುಮಾರ್ ಹೇಳಿರುವುದರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ.22ರ ನಂತರ ಹೋಗುತ್ತೇನೆ ಎಂದು ಹೇಳುತ್ತಾರೆ. ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ಹಾಗೂ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟರು.
ನೀವೇಕೆ ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮಮಂದಿರ ಅಂದುಕೊಳ್ಳುತ್ತೀರಾ? ನಾವು ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ. ಇಡೀ ವಿಶ್ವದ ಹಿಂದೂಗಳನ್ನು ಒಂದು ಮಾಡಲು ಶ್ರೀರಾಮ ಇರೋದು. ಯಾವ ರೀತಿ ರಾಜಕಾರಣ ಮಾಡುತ್ತಿದ್ದೇವೆ ಎಂಬುದನ್ನು ನೀವು ಹೇಳಿದರೆ, ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆಂದು ತಿರುಗೇಟು ನೀಡಿದರು.
ಇದೇ ವೇಳೆ ಹಾವೇರಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಹಾವೇರಿಯ ಲಾಡ್ಜ್‌ವೊಂದರಲ್ಲಿ ಮಹಿಳೆಯ ಮೇಲೆ ಏಳು ಜನ ಅತ್ಯಾಚಾರ ಮಾಡಿದ್ದಾರೆ. ಇವರನ್ನು ಮನುಷ್ಯರೆಂದು ಕರೆಯಬೇಕಾ? ಯಾವುದೇ ಧರ್ಮದ ಹೆಣ್ಣು ಮಗಳಾಗಲಿ ಇಂತಹ ನೀಚ ಕೃತ್ಯ ನಡೆಯಬಾರದು. ಗೃಹ ಸಚಿವರು ಇಂತಹ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


