ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ! ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಮಾಸಾಶನಕ್ಕಾಗಿ ಅಜ್ಜಿಯೊಬ್ಬರು 5 ಕಿ. ಮೀ ದೂರ ತೆವಳಿಕೊಂಡು ಬಂದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕ್ ಕುಣಿಬೆಳಕೆರೆ ಗ್ರಾಮದ ಅಜ್ಜಿ, ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ್ದಾರೆ.

ಬೆಂಗಳೂರು: ಮಾಸಾಶನಕ್ಕಾಗಿ ಅಜ್ಜಿಯೊಬ್ಬರು 5 ಕಿ. ಮೀ ದೂರ ತೆವಳಿಕೊಂಡು ಬಂದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕ್ ಕುಣಿಬೆಳಕೆರೆ ಗ್ರಾಮದ ಅಜ್ಜಿ, ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ, ಇಂತಹ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ. ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ ಎಂದು ಟೀಕಿಸಿದ್ದಾರೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


