ರಾಜಕೀಯ

ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ

ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಕುರಿತು ಕಿಡಿಕಾರಿದೆ.

ಸಂಸದ ಅನಂತ್ ಕುಮಾರ್ ಹೆಗಡೆ ಕುಂಭಕರ್ಣನಿದ್ದಂಗೆ, ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು. ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ ಎಂದು ಹೇಳಿದೆ,

ಕಾಂಗ್ರೆಸ್ ಪಕ್ಷದ ಬಗ್ಗೆ ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಹರಿಹಾಯ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.