ಲೋಕಸಭಾ ಚುನಾವಣೆ: ಜನವರಿ 19 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಜ. 19 ರಂದು ನಡೆಯುವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಎಂದರು.
ಶೀಘ್ರ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, "ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ತಿಳಿಸಿದರು.
ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ:
ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, "ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ" ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


