ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದಾರೆ: ಎಚ್‌ಡಿ ದೇವೇಗೌಡ
ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರು: ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.
ಬೇಲೂರಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಯಿಂದ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ದೇಶದ 150 ಕೋಟಿ ಜನರಿಗಾಗಿ ಮೋದಿಜತೆ ಸಂಬಂಧ ಬೆಳೆಸಿದ್ದೇನೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಎಷ್ಟುಸೀಟು ಕೊಡುತ್ತಾರೆ ಎಂಬುದು ಮುಖ್ಯವಲ್ಲ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದು ಮುಖ್ಯ. ಮೋದಿಯವರು 10 ವರ್ಷದಲ್ಲಿ ಅಯೋಧ್ಯೆ, ಕಾಶಿ ಗಂಗಾನದಿಯ ಸ್ವರೂಪವನ್ನು ಬದಲಿಸಿ ರಸ್ತೆಗಳನ್ನು ಕ್ರಾಂತಿಕಾರಿ ಮಾಡಿದ್ದಾರೆ. ಸಮಾಜದ ಎಲ್ಲಾ ವರ್ಗಗಳಿಗೆ ನ್ಯಾಯ ಒದಗಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದಾರೆಂದು ಕೊಂಡಾಡಿದರು.
ಬಳಿಕ ಮೋದಿಯನ್ನು ಬೆಂಬಲಿಸುವಂತೆ ಜೆಡಿಎಸ್ ಕಾರ್ಯಕರ್ತರನ್ನು ಒತ್ತಾಯಿಸಿದ ಅವರು, ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿರುವ ನಾಯಕರಿಗೆ ಮೋದಿಯವರಿಗಿರುವ ಸಾಮರ್ಥ್ಯವಿಲ್ಲ. ಕಾಂಗ್ರೆಸ್ ಮತ್ತು ಅದರ ನಾಯಕರ ಬಗ್ಗೆ ಮಾತನಾಡಲು ಸಾಕಷ್ಟು ಇದೆ, ನಮ್ಮ ಪಕ್ಷವನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವಿಶ್ರಮಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ಸಾಮಾನ್ಯ ಜನರು ಮತ್ತು ರೈತರ ಹಿತಾಸಕ್ತಿಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಇಂದು ಗಾಂಧಿ, ನೆಹರು ಕಾಂಗ್ರೆಸ್ ಆಗಿ ಉಳಿದಿಲ್ಲ, ಬೇಕಾದಾಗ ಉಪಯೋಗಿಸಿಕೊಂಡು ಬೇಡ ಎಂದಾಗ ಕಸದಂತೆ ಎಸೆಯುತ್ತಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಎಲ್ಲಿ ಹೋಗುತ್ತವೆಯೋ ತಿಳಿಯದು ಎಂದು ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


